Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರು – ಬೆಂಗಳೂರು ನಡುವೆ ಎಕ್ಸ್ ಪ್ರೇಸ್ ವೇ – 2028 ರಿಂದ ನಿರ್ಮಾಣ ಕಾಮಗಾರಿ ಆರಂಭ ಸಾಧ್ಯತೆ.

Spread the love

ಮಂಗಳೂರು : ಮಂಗಳೂರು ಹಾಗೂ ಬೆಂಗಳೂರಿನಲ್ಲಿರುವ ಕರಾವಳಿಗರಿಗೆ ಗುಡ್ ನ್ಯೂಸ್ ಬಂದಿದ್ದು, ಬೆಂಗಳೂರು ಮತ್ತು ಮಂಗಳೂರು ಮಧ್ಯೆ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮುಂದಾಗಿದೆ.

2028 ರಿಂದ ಕಾಮಗಾರಿ ಪ್ರಾರಂಭವಾಗುವ ಸಾಧ್ಯತೆ ಇದೆ.ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಕರ್ನಾಟಕ ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಂಡಿವೆ. ಎಲ್ಲವೂ ನಿಗದಿಯಂತೆ ನಡೆದರೆ 2028 ರಿಂದ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ.

ಸಮಗ್ರ ಯೋಜನಾ ವರದಿಗಾಗಿ ಸರ್ಕಾರ ಜುಲೈನಲ್ಲಿ ಟೆಂಡರ್‌ ಆಹ್ವಾನಿಸಿತ್ತು. ನವೆಂಬರ್‌ ವೇಳೆಗೆ ಒಟ್ಟು 9 ಕಂಪನಿಗಳು ಬಿಡ್‌ ಸಲ್ಲಿಸಿದ್ದು ಈ ಪೈಕಿ ಒಂದು ಕಂಪನಿಯನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಕಂಪನಿಗೆ ಡಿಪಿಆರ್‌ ಪೂರ್ಣಗೊಳಿಸಲು 540 ದಿನಗಳ ಸಮಯವನ್ನು ನೀಡಲಾಗುತ್ತದೆ. ಡಿಪಿಆರ್‌ ಪೂರ್ಣಗೊಂಡ ಬಳಿಕ ಎಕ್ಸ್‌ಪ್ರೆಸ್‌ವೇ ನಿರ್ಮಾಣದ ಕೆಲಸ ಆರಂಭವಾಗಲಿದೆ.

ಹಾಸನದ ಮೂಲಕ ಈ ಎಕ್ಸ್‌ಪ್ರೆಸ್‌ವೇ ಹಾದು ಹೋಗಲಿದೆ. ಸದ್ಯ ಈಗ 350 ಕಿ.ಮೀ ದೂರ ಕ್ರಮಿಸಲು ಸುಮಾರು 7-8 ಗಂಟೆ ಸಮಯ ತೆಗೆದುಕೊಳ್ಳುತ್ತದೆ. ನಾಲ್ಕು ಅಥವಾ ಆರು ಪಥಗಳನ್ನು ಒಳಗೊಂಡಿರುವ ಈ ಎಕ್ಸ್‌ಪ್ರೆಸ್‌ವೇ ನಿರ್ಮಾಣವಾದರೆ ಸಮಯ ಅರ್ಧಕ್ಕರ್ಧ ಕಡಿಮೆಯಾಗಲಿದೆ.


Spread the love
Share:

administrator

Leave a Reply

Your email address will not be published. Required fields are marked *