ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ಎಎಸ್‌ಕ್ಯೂ’ ಪ್ರಶಸ್ತಿ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಎಂಬ ಖ್ಯಾತಿಗೆ ಪಾತ್ರವಾಗಿದ್ದು, ‘ಏರ್‌ಪೋರ್ಟ್ ಸರ್ವಿಸ್ ಕ್ವಾಲಿಟಿ’- ಎಎಸ್‌ಕ್ಯೂ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.
ಈ ಗೌರವವು ಪ್ರಯಾಣಿಕರಿಗೆ ಅತ್ಯುತ್ತಮ ಸೇವೆ ಮತ್ತು ಸುಗಮವಾದ ಪ್ರಯಾಣದ ಅನುಭವವನ್ನು ಒದಗಿಸುವ ವಿಮಾನ ನಿಲ್ದಾಣದ ಅಚಲವಾದ ಬದ್ಧತೆಗೆ ಸಾಕ್ಷಿಯಾಗಿದೆ. ಅಲ್ಲದೆ ಇದು ವಿಮಾನಯಾನ ಉದ್ಯಮದಲ್ಲಿ ಹೊಸ ಮಾನದಂಡವನ್ನು ಸ್ಥಾಪಿಸಿದೆ.
ಈ ಪ್ರಶಸ್ತಿಯು ವಿಮಾನ ನಿಲ್ದಾಣದ ಸಮಗ್ರ ತಂಡದ ಕಠಿಣ ಪರಿಶ್ರಮ ಮತ್ತು ಬದ್ಧತೆಯನ್ನು ಪ್ರಯಾಣಿಕರು ಗುರುತಿಸಿರುವುದರ ಪ್ರತೀಕ ಎಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣವು ಇಮಿಗ್ರೇಶನ್, ಕಸ್ಟಮ್ಸ್ ಮತ್ತು ಬ್ಯಾಗೇಜ್ ಹ್ಯಾಂಡ್ಲಿಂಗ್ ಸಿಸ್ಟಮ್‌ಗಳಲ್ಲಿ ಸುಧಾರಿತ ತಂತ್ರಜ್ಞಾನವನ್ನು ಪರಿಚಯಿಸುವ ಮೂಲಕ ಪ್ರಯಾಣಿಕರಿಗೆ ಅತ್ಯುತ್ತಮ ಸೇವಾ ಸೌಲಭ್ಯಗಳನ್ನು ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಮುಂಬರುವ 2025ರ ಸೆಪ್ಟೆಂಬರ್ 8 ರಿಂದ 11 ರ ತನಕ ಚೀನಾದ ಗುವಾಂಗ್‌ಝೌನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಎಎಸ್‌ಕ್ಯೂ ಪ್ರಶಸ್ತಿ ಪ್ರದಾನ ನೆರವೇರಲಿದೆ.