ಮಂಗಳೂರು: ಮೀನುಗಾರಿಕಾ ಬಂದರಿನಲ್ಲಿ ನೀರಿಗೆ ಬಿದ್ದ ಮಹಿಳೆ; ಮೀನುಗಾರರ ಸಾಹಸದಿಂದ ಬದುಕುಳಿದ ಜೀವ!

ಮಂಗಳೂರು: ನಿರ್ಮಾಣ ಹಂತದಲ್ಲಿರುವ ಡಾಕ್ ಸಮೀಪ ಮಹಿಳೆಯೊಬ್ಬರು ಆಕಸ್ಮಿಕವಾಗಿ ನೀರಿಗೆ ಬಿದ್ದಿರುವ ಘಟನೆ ಮಂಗಳೂರು ನಗರದ ಮೀನುಗಾರಿಕಾ ಬಂದರ್ ನಲ್ಲಿ ನಡೆದಿದೆ.

ಘಟನೆ ಗಮನಿಸಿದ ಸ್ಥಳೀಯ ಮೀನುಗಾರರು ಯಾವುದೇ ವಿಳಂಬ ಮಾಡದೆ ಸಮುದ್ರಕ್ಕೆ ಇಳಿದು ಮಹಿಳೆಯ ರಕ್ಷಣೆಗೆ ಮುಂದಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ಮಹಿಳೆಯನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿ ದಡಕ್ಕೆ ಕರೆತರಲಾಯಿತು. ಮೀನುಗಾರರ ಸಮಯಪ್ರಜ್ಞೆ ಮತ್ತು ಧೈರ್ಯದಿಂದ ಮಹಿಳೆಯ ಜೀವ ಉಳಿದಿದೆ.ಸ್ಥಳದಲ್ಲಿದ್ದವರು ಮೀನುಗಾರರ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಮಹಿಳೆ ನೀರಿಗೆ ಬಿದ್ದದ್ದು ಆಕಸ್ಮಿಕವೇ ಅಥವಾ ಬೇರೆ ಕಾರಣವಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಯುತ್ತಿದೆ.