Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರು ಸಿಸಿಬಿ ಕಾರ್ಯಾಚರಣೆ: 24 ಲಕ್ಷ ರೂ. ಮೌಲ್ಯದ ಎಂಡಿಎಂಎ ಜತೆ ಮೂವರ ಬಂಧನ

Spread the love

ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ದ್ರವ್ಯಗಳನ್ನು (MDMA) ಮಾರಾಟ ಮಾಡಿದ ಆರೋಪದ ಮೇಲೆ ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು ಮೂವರನ್ನು ಬಂಧಿಸಿ, 24 ಲಕ್ಷ ರೂ. ಮೌಲ್ಯದ 240 ಗ್ರಾಂ MDMA ಅನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು ನಗರದಿಂದ ಮಾದಕ ದ್ರವ್ಯಗಳನ್ನು ಖರೀದಿಸಿ ಮಂಗಳೂರು ನಗರದ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ವಿಶ್ವಾಸಾರ್ಹ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಸೆಪ್ಟೆಂಬರ್ 26 ರಂದು ಸಂಜೆ ಉಳ್ಳಾಲ ತಾಲ್ಲೂಕಿನ ಮುಡಿಪುವಿನ ಕಾಯರ್ಗೋಳಿ ಕ್ರಾಸ್ ಬಳಿ ಕಾರ್ಯಾಚರಣೆ ನಡೆಸಿದರು.
ಈ ಕಾರ್ಯಾಚರಣೆಯ ಸಮಯದಲ್ಲಿ, ಮೂವರು ಆರೋಪಿಗಳನ್ನು ಬಂಧಿಸಲಾಯಿತು, ಮತ್ತು ಅವರಿಂದ 24 ಲಕ್ಷ ರೂ. ಮೌಲ್ಯದ 240 ಗ್ರಾಂ ಎಂಡಿಎಂಎ, ನಾಲ್ಕು ಮೊಬೈಲ್ ಫೋನ್‌ಗಳು ಮತ್ತು ಮಾದಕ ದ್ರವ್ಯಗಳನ್ನು ಸಾಗಿಸಲು ಬಳಸಿದ ಟೆಂಪೋವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಆಸ್ತಿಯ ಒಟ್ಟು ಮೌಲ್ಯ 29.80 ಲಕ್ಷ ರೂ. ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಕೈರಂಗಳ ಗ್ರಾಮದ ನಿವಾಸಿಗಳಾದ ನವಾಜ್ ಅಲಿಯಾಸ್ ನವ್ವ ಅಲಿಯಾಸ್ ಮುಡಿಪು ನವಾಜ್ (35), ಮೊಹಮ್ಮದ್ ಆರಿಫ್ ಎನ್. (36), ಲಾಯ್ ಡಿಸೋಜಾ (35) ಬಂಧಿತ ಆರೋಪಿಗಳು.
ನವಾಜ್ ವಿರುದ್ಧ 16 ಪ್ರಕರಣಗಳು ಬಂಧಿತ ಆರೋಪಿ ನವಾಜ್ ಅಲಿಯಾಸ್ ನವ್ವಾ ವಿರುದ್ಧ ಮಂಗಳೂರು ನಗರದಾದ್ಯಂತ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಬೆದರಿಕೆ, ಕೊಲೆಯತ್ನ, ಅಪಹರಣ, ಅತ್ಯಾಚಾರ, ವಂಚನೆ, ಜಾನುವಾರು ಕಳ್ಳತನ ಮತ್ತು ಮಾದಕವಸ್ತು ಮಾರಾಟ ಸೇರಿದಂತೆ ವಿವಿಧ ಅಪರಾಧಗಳಿಗೆ ಸಂಬಂಧಿಸಿದ ಸುಮಾರು 16 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪೈಕಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ 12 ಪ್ರಕರಣಗಳು, ಉಳ್ಳಾಲದಲ್ಲಿ ಎರಡು, ಮೂಲ್ಕಿಯಲ್ಲಿ ಒಂದು ಮತ್ತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿವೆ. ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ, ಆತನ ವಿರುದ್ಧ ಉಳ್ಳಾಲ ಮತ್ತು ಕೊಣಾಜೆ ಪೊಲೀಸ್ ಠಾಣೆಗಳಲ್ಲಿ ತಲಾ ಎರಡು ಪ್ರಕರಣಗಳು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ.
ಜಾಲದಲ್ಲಿರುವ ಇತರರಿಗಾಗಿ ಹುಡುಕಾಟ ಮಾದಕವಸ್ತು ಮಾರಾಟ ಮತ್ತು ಸಾಗಣೆ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದ್ದು, ಅವರ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿದೆ. ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.


Spread the love
Share:

administrator

Leave a Reply

Your email address will not be published. Required fields are marked *