Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರು: ನಿರಂತರ ಭಾರೀ ಮಳೆಗೆ ಕೈಕಂಬ-ಬಿ.ಸಿ.ರೋಡ್ ಹೆದ್ದಾರಿಯಲ್ಲಿ ಭೂಕುಸಿತ; ವಾಹನ ಸವಾರರಿಗೆ ಎಚ್ಚರಿಕೆ!

Spread the love

ಮಂಗಳೂರು: ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೈಕಂಬ-ಬಿ.ಸಿ.ರೋಡ್ ಹೆದ್ದಾರಿಯ ಕಾಜಿಲ ಸಮೀಪ ಮಂಗಳವಾರ ಭೂಕುಸಿತ ಸಂಭವಿಸಿದೆ.

ಭೂಕುಸಿತದಿಂದ ಮಣ್ಣು ಮತ್ತು ಅವಶೇಷಗಳು ರಸ್ತೆಯ ಬದಿಗೆ ಜಾರಿಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.ನಿರಂತರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಂಬಂಧಪಟ್ಟ ಅಧಿಕಾರಿಗಳು ಭೂಕುಸಿತದ ಮಣ್ಣು ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದಾರೆ. ಮತ್ತಷ್ಟು ಭೂಕುಸಿತ ಸಂಭವಿಸದಂತೆ ನಿಗಾ ವಹಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ದೊಡ್ಡ ಪ್ರಮಾಣದ ಆಸ್ತಿ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.


Spread the love
Share:

administrator

Leave a Reply

Your email address will not be published. Required fields are marked *