Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರು: ತೊಕ್ಕೊಟ್ಟು ವಿನಮ್ರ ಬಾರ್‌ಗೆ ತಲವಾರು ಬೀಸಿ ದಾಂಧಲೆ; ಕುಖ್ಯಾತ ರೌಡಿಶೀಟರ್ ಸೇರಿ ಇಬ್ಬರ ಬಂಧನ!

Spread the love

ಉಳ್ಳಾಲ: ತೊಕ್ಕೊಟ್ಟು ವಿನಮ್ರ ಬಾರ್‌ಗೆ ತಲವಾರು ಬೀಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಬಾರ್ ಬಂದ್ ಮಾಡುವಂತೆ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಕುಖ್ಯಾತ ರೌಡಿಶೀಟರ್ ಸೇರಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಉಳ್ಳಾಲದ ಮಾರ್ಗತಲೆ ನಿವಾಸಿ ಮೊಹಮ್ಮದ್ ಶಾಕಿರ್ (31) ಮತ್ತು ಉಳ್ಳಾಲದ ಮಂಚಿಲ ನಿವಾಸಿ ಅಶ್ಫಾಕ್ (28) ಎಂದು ಗುರುತಿಸಲಾಗಿದೆ. ಶಾಕಿರ್ ಕುಖ್ಯಾತ ರೌಡಿಶೀಟರ್ ಆಗಿದ್ದು ವೆಲ್ಡರ್ ಆಗಿ ಕೆಲಸ ಮಾಡುತ್ತಿದ್ದ. ಅಶ್ಫಾಕ್ ಆಟೋರಿಕ್ಷಾ ಚಾಲಕನಾಗಿದ್ದ.ಭಾನುವಾರ ರಾತ್ರಿ 12:00 ರಿಂದ 12:20 ರ ನಡುವೆ ಈ ಘಟನೆ ನಡೆದಿದೆ. ಶಾಕಿರ್ ತಲವಾರು ಹಿಡಿದುಕೊಂಡು ಸಾರ್ವಜನಿಕರಿಗೆ ಬೆದರಿಕೆ ಹಾಕಿದ್ದಾನೆ. ಆರೋಪಿ ಅಶ್ಫಾಕ್ ರಿಕ್ಷಾದಲ್ಲಿ ಬಂದಿದ್ದ ಶಾಕಿರ್ ಬಾರ್‌ಗೆ ಬಂದು, ಮಾರಕಾಸ್ತ್ರವನ್ನು ಬೀಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಬಾರ್ ಅನ್ನು ಬಂದ್ ಮಾಡುವಂತೆ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಘಟನೆಯ ದೃಶ್ಯಾವಳಿಗಳು ಬಾರ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ತಲವಾರು ಹಿಡಿದು ವ್ಯಕ್ತಿ ದಾಂಧಲೆ ನಡೆಸುತ್ತಿದ್ದ ವೇಳೆ ಬಾರ್‌ನಲ್ಲಿದ್ದ ಗ್ರಾಹಕರು ಭಯಭೀತರಾಗಿ ಓಡಿಹೋದರು ಎನ್ನಲಾಗಿದೆ.ಘಟನೆಯ ಬಳಿಕ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಕಾನೂನಿನ ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶಾಕಿರ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಹಲವಾರು ಅಪರಾಧ ಪ್ರಕರಣಗಳು ದಾಖಲಾಗಿವೆ. ಹೆಚ್ಚಿನ ತನಿಖೆ ಮುಂದುವರಿದಿದೆ.


Spread the love
Share:

administrator

Leave a Reply

Your email address will not be published. Required fields are marked *