ಸುಳ್ಯದಲ್ಲಿ ಘನತ್ಯಾಜ್ಯ ಘಟಕದಲ್ಲಿ ಭಾರೀ ಬೆಂಕಿ – ಅಪಾರ ಆಸ್ತಿ ಹಾನಿ, ಶಾರ್ಟ್ ಸರ್ಕ್ಯೂಟ್ ಶಂಕೆ

ಸುಳ್ಯ: ಅರಂತೋಡು ಗ್ರಾಮ ಪಂಚಾಯತ್ನ ಘನತ್ಯಾಜ್ಯ ಘಟಕಕ್ಕೆ ಬೆಂಕಿ ತಗುಲಿದ್ದು ಘಟಕ ಹೊತ್ತಿ ಉರಿದ ಘಟನೆ ವರದಿಯಾಗಿದೆ.

ಘಟಕದಲ್ಲಿ ಪೂರ್ತಿಯಾಗಿ ತ್ಯಾಜ್ಯ ತುಂಬಿಡಲಾಗಿದ್ದು ಬೆಂಕಿ ತಗುಲಿ ಹೊತ್ತಿ ಉರಿದಿದೆ. ಕಟ್ಟಡ ಮತ್ತಿತರ ಸೇರಿ ಅಪಾರ ಹಾನಿ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿ ನಂದಿಸುವ ಪ್ರಯತ್ನ ನಡೆಸಲಾಗುತ್ತಿದೆ.ಯಾವುದೇ ಗಾಯಗಳು ಅಥವಾ ಸಾವುನೋವುಗಳು ವರದಿಯಾಗಿಲ್ಲವಾದರೂ, ಆರ್ಥಿಕ ನಷ್ಟವು ಗಣನೀಯವಾಗಿರಬಹುದೆಂದು ನಿರೀಕ್ಷಿಸಲಾಗಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ತೀವ್ರ ಅಗ್ನಿಶಾಮಕ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.
