Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭಾರೀ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Spread the love

ಬ್ರಹ್ಮಾವರ : ಇತ್ತೀಚೆಗೆ ಅಗ್ನಿ ಅವಘಡಗಳು ಹೆಚ್ಚಾಗುತ್ತಿದ್ದು, ಇಂದು ಮತ್ತೊಂದು ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿರುವ ವಾರಂಬಳ್ಳಿ ಪಂಚಾಯತ್‌ಗೆ ಸೇರಿರುವ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಶನಿವಾರ(ಮಾ.01) ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯು ಕೆನ್ನಾಲಗೆಗೆ ಕಸ ಸಂಗ್ರಹದ ಎರಡು ವಾಹನಗಳು ಆಹುತಿಯಾಗಿವೆ. ಯಂತ್ರೋಪಕರಣಗಳು ಮತ್ತು ಉಪಕರಣಗಳಿಗೆ ಹಾನಿಯಾಗಿದೆ. ಅಲ್ಲದೇ, ಪಕ್ಕದ ಎರಡು ಅಂಗಡಿಗಳಿಗೂ ಬೆಂಕಿ ತಗುಲಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಮಲ್ಪೆ ಕುಂದಾಪುರ ಉಡುಪಿಯ ಅಗ್ನಿಶಾಮಕ ದಳದವರು ಆಗಮಿಸಿ, ಬೆಂಕಿ ನಂದಿಸಿದ್ದಾರೆ.
ಘಟನೆಯಲ್ಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂ*ಕಿ ಸಂಭವಿಸಿರುವ ಸಾಧ್ಯತೆಯಿದೆ. ಬ್ರಹ್ಮಾವರ ಪೊಲೀಸರು ಸಿಸಿಟಿವಿಯ ಡಿವಿಆರ್ ವಶಪಡಿಸಿಕೊಂಡಿದ್ದು, ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ


Spread the love
Share:

administrator

Leave a Reply

Your email address will not be published. Required fields are marked *