Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಾತಾ ತ್ರಿಪುರ ಸುಂದರಿ ದೇವಾಲಯ – 51 ಶಕ್ತಿ ಪೀಠಗಳಲ್ಲಿ ಒಂದು, ಇಂದು ಉದ್ಘಾಟನೆ

Spread the love

ತ್ರಿಪುರಾ: ತ್ರಿಪುರಾದ ಉದಯಪುರದಲ್ಲಿ ಹಿಂದೂಗಳು ಪೂಜಿಸುವ 51 ಶಕ್ತಿ ಪೀಠಗಳಲ್ಲಿ ಒಂದಾದ ಪುನರಾಭಿವೃದ್ಧಿಗೊಳಿಸಲಾದ ಮಾತಾ ತ್ರಿಪುರ ಸುಂದರಿ ದೇವಾಲಯವನ್ನು ಪ್ರಧಾನಿ ನರೇಂದ್ರ ಮೋದಿಇಂದು ಇನ್ನೇನು ಕೆಲವೇ ಕ್ಷಣಗಳಲ್ಲಿ ಉದ್ಘಾಟಿಸಲಿದ್ದಾರೆ. ಅರುಣಾಚಲ ಪ್ರದೇಶದ ಭೇಟಿಯ ನಂತರ ಪ್ರಧಾನಿ ಮೋದಿ ಅಗರ್ತಲಾಕ್ಕೆ ಆಗಮಿಸಲಿದ್ದಾರೆ. ಇದಾದ ನಂತರ ಉದಯಪುರದ ಗೋಮತಿ ಜಿಲ್ಲಾ ಕೇಂದ್ರಕ್ಕೆ ತೆರಳಿ ಪ್ರಸಾದ್ ಯೋಜನೆಯಡಿಯಲ್ಲಿ ಪುನರಾಭಿವೃದ್ಧಿಗೊಳಿಸಲಾದ ತ್ರಿಪುರ ಸುಂದರಿ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. ಈ ವೇಳೆ ಪ್ರಧಾನ ಮಂತ್ರಿಗಳು ದೇವಾಲಯದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಪ್ರಧಾನ ಮಂತ್ರಿ ಮೋದಿ ಇಲ್ಲಿ ಸಾರ್ವಜನಿಕ ಭಾಷಣ ಮಾಡುವುದಿಲ್ಲ. ಈಗಾಗಲೇ ಪ್ರಧಾನಿ ಮೋದಿಯವರ ಭೇಟಿಯ ಹಿನ್ನೆಲೆಯಲ್ಲಿ ಅಗರ್ತಲಾ ಮತ್ತು ದೇವಾಲಯ ಪಟ್ಟಣವಾದ ಉದಯಪುರದಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *