Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಳ್ಳತನದ ಶಂಕೆಯಲ್ಲಿ ವಲಸೆ ಕಾರ್ಮಿಕನ ಹತ್ಯೆ

Spread the love

ಕೊಚ್ಚಿ: ಕಳ್ಳತನದ ಶಂಕೆಯಲ್ಲಿ 31 ವರ್ಷದ ವಲಸೆ ಕಾರ್ಮಿಕನನ್ನು ಸ್ಥಳೀಯ ನಿವಾಸಿಗಳ ಗುಂಪೊಂದು ಥಳಿಸಿ ಹತ್ಯೆ ನಡೆಸಿದ ಆಘಾತಕಾರಿ ಘಟನೆ ಕೇರಳದ ಪಾಲಕ್ಕಾಡ್ ನ ವಲಯಾರ್ ನಲ್ಲಿ ನಡೆದಿದೆ.

ಮೃತ ಕಾರ್ಮಿಕನನ್ನು ಛತ್ತೀಸ್‌ಗಢದ ಬಿಲಾಸ್‌ಪುರ ಮೂಲದ ರಾಮನಾರಾಯಣ್ ಭಯಾರ್(31) ಎಂದು ಗುರುತಿಸಲಾಗಿದೆ. ಇವರು ಕಾಂಜಿಕೋಡ್‌ನಲ್ಲಿ ವಾಸಿಸುತ್ತಿದ್ದರು. ಅಟ್ಟಪ್ಪಲ್ಲಂ ಪೂರ್ವದಲ್ಲಿ ಈ ಘಟನೆ ನಡೆದಿದೆ.

ಸ್ಥಳೀಯ ನಿವಾಸಿಗಳ ಪ್ರಕಾರ, ಬುಧವಾರ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಭಯಾರ್ ಎನ್ನುವ ವ್ಯಕ್ತಿ ಕಳ್ಳತನ ನಡೆಸುವ ಉದ್ದೇಶದಿಂದ ಆ ಪ್ರದೇಶದ ಹಲವಾರು ಮನೆಗಳಿಗೆ ನುಗ್ಗಲು ಪ್ರಯತ್ನಿಸಿದ್ದಾನೆ. ಈ ವೇಳೆ ನಡೆದ ಗಲಾಟೆಯಲ್ಲಿ ಆತ ಗಾಯಗೊಂಡಿದ್ದಾನೆ. ನಂತರ ಪೊಲೀಸರು ಸಂಜೆ ಸುಮಾರು 4.30ರ ವೇಳೆಗೆ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಘಟನೆ ಸಂಬಂಧ ಐವರನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

“ಭಯಾರ್ ನಾಲ್ಕು ದಿನಗಳ ಹಿಂದೆ ಕೆಲಸ ಹುಡುಕಿಕೊಂಡು ಕೇರಳಕ್ಕೆ ಬಂದಿದ್ದ. ಸೂಕ್ತ ಉದ್ಯೋಗ ಸಿಗದ ಕಾರಣ ಮನೆಗೆ ಮರಳಲು ಯೋಜಿಸುತ್ತಿದ್ದರು. ಅವರು ಆ ಪ್ರದೇಶಕ್ಕೆ ಹೊಸಬರಾಗಿದ್ದರು. ಅವರಿಗೆ ಸರಿಯಾಗಿ ಮಾರ್ಗಗಳು ತಿಳಿದಿರಲಿಲ್ಲ. ದಾರಿ ತಪ್ಪಿ ಘಟನೆ ನಡೆದ ಸ್ಥಳಕ್ಕೆ ಅವರು ತಲುಪಿರಬೇಕು. ಭಯಾರ್‌ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇರಲಿಲ್ಲ. ಅವರಿಗೆ 8 ಮತ್ತು 10 ವರ್ಷ ವಯಸ್ಸಿನ ಇಬ್ಬರು ಮಕ್ಕಳಿದ್ದಾರೆ. ಸುಳ್ಳು ಆರೋಪದಲ್ಲಿ ರಾಮನಾರಾಯಣ್ ಭಯಾರ್ ಅವರನ್ನು ಗುಂಪು ಥಳಿಸಿ ಹತ್ಯೆ ಮಾಡಿದೆ. ಮರಣೋತ್ತರ ಪರೀಕ್ಷೆಯಲ್ಲಿ ಭಯಾರ್ ಗಂಭೀರ ಗಾಯಗಳಿಂದ ಮೃತಪಟ್ಟಿರುವುದು ದೃಢಪಟ್ಟಿದೆ” ಎಂದು ಮೃತ ಕಾರ್ಮಿಕನ ಸಂಬಂಧಿಯೋರ್ವರು ಹೇಳಿದ್ದಾರೆ.

“ವಲಯಾರ್ ಬಳಿಯ ಕಿಝಕೆಯಟ್ಟಪ್ಪಲ್ಲಂನಲ್ಲಿ ಕಳ್ಳತನದ ಶಂಕೆಯಲ್ಲಿ ಭಯಾರ್ ಮೇಲೆ ದಾಳಿ ಮಾಡಲಾಗಿದೆ. ಘಟನೆ ಬಗ್ಗೆ ವಿಸ್ಕೃತ ತನಿಖೆ ನಡೆಯುತ್ತಿದೆ” ಎಂದು ಪೊಲೀಸರು ತಿಳಿಸಿದ್ದಾರೆ. ಆರಂಭದಲ್ಲಿ ಭಯಾರ್ ಜಾರ್ಖಂಡ್ ಮೂಲದವ ಎಂದು ಪೊಲೀಸರು ಹೇಳಿದ್ದರು, ಆದರೆ ನಂತರ ಅವರು ಛತ್ತೀಸ್‌ಗಢದ ನಿವಾಸಿ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.

Onmanorama ವರದಿಯ ಪ್ರಕಾರ, ಮರಣೋತ್ತರ ಪರೀಕ್ಷೆ ವರದಿಯು ಭಯಾರ್ ಮೇಲೆ ಕೋಲಿನಿಂದ ಕ್ರೂರವಾಗಿ ಹಲ್ಲೆ ನಡೆಸಿರುವುದನ್ನು ಬಹಿರಂಗಪಡಿಸಿದೆ. ಅವರ ತಲೆಯಿಂದ ಕಾಲಿನವರೆಗೆ 80ಕ್ಕೂ ಹೆಚ್ಚು ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆ ವರದಿಯು ಅವರು ತೀವ್ರವಾದ ಹಲ್ಲೆಯಿಂದ ಮೃತಪಟ್ಟಿರುವುದನ್ನು ದೃಢಪಡಿಸಿದೆ.


Spread the love
Share:

administrator

Leave a Reply

Your email address will not be published. Required fields are marked *