ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು, ವಾಹನ ಸಂಪೂರ್ಣ ಸುಟ್ಟು ಕರಕಲು

ಬೆಳಗಾವಿ : ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಘಟನೆ ನಡೆದಿದ್ದು, ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಐನಾಪುರ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ರಾಯಬಾಗ ತಾಲ್ಲೂಕಿನ ಕುಡಚಿಯಿಂದ ಹೈದರಾಬಾದ್ ಕಡೆಗೆ ಮಾಂಸ ಸಾಗಿಸುತ್ತಿದ್ದ ವಾಹನ, ಐನಾಪುರ ದಾಟುತ್ತಿತ್ತು. ಅದರಲ್ಲಿ ಗೋಮಾಂಸ ಸಾಗಿಸುತ್ತಿದ್ದಾಗಿ ಶಂಕಿಸಿ, ಕೆಲವು ಕಾರ್ಯಕರ್ತರು ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಈ ಕಾರ್ಯಕರ್ತರು ಯಾವ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಬರುವಷ್ಟರಲ್ಲಿ ವಾಹನ ಸುಟ್ಟು ಕರಕಲಾಗಿತ್ತು