ಕರ್ನಾಟಕದಲ್ಲಿ ಮುಂಗಾರು ಪ್ರವೇಶ: ಕರಾವಳಿ, ಒಳನಾಡಿನಲ್ಲಿ ಭಾರಿ ಮಳೆ, ಹಲವೆಡೆ ರೆಡ್ ಅಲರ್ಟ್

ಬೆಂಗಳೂರು: ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದೆ. ಇಂದು ಕರ್ನಾಟಕದ ಕರಾವಳಿ, ಕೊಡಗು, ಶಿವಮೊಗ್ಗ, ಹಾಸನ ಹಾಗೂ ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರೆಡ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಉತ್ತರ ಕನ್ನಡ, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್ಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದ್ದು, ಸಾಧಾರಣ ಮಳೆಯಾಗಲಿದೆ.
ಎಲ್ಲೆಲ್ಲಿ ಮಳೆಯಾಗಿದೆ? ಭಾಗಮಂಡಲ, ನಾಪೋಕ್ಲು, ಮುಲ್ಕಿ, ಸುಳ್ಯ, ಧರ್ಮಸ್ಥಳ, ಮಂಗಳೂರು, ಗೇರುಸೊಪ್ಪ, ಉಪ್ಪಿನಂಗಡಿ, ಆಗುಂಬೆ, ಸೋಮವಾರಪೇಟೆಯಲ್ಲಿ ಭಾರಿ ಮಳೆಯಾಗಿದೆ. ಮಾಣಿ, ನಿಪ್ಪಾಣಿ, ಕಾರ್ಕಳ, ಪಣಂಬೂರು, ಕದ್ರಾ, ಹೊನ್ನಾವರ, ಅಣ್ಣಿಗೆರೆ, ಪೊನ್ನಂಪೇಟೆ, ಕಳಸ, ಕುಶಾಲನಗರ, ಬಂಡೀಪುರ, ಜಯಪುರ, ಶೃಂಗೇರಿ, ಹಾರಂಗಿ, ಕೊಪ್ಪ, ನರಗುಂದ, ಕಾರವಾರ, ಚಿಕ್ಕೋಡಿ, ದೇವರಹಿಪ್ಪರಗಿ, ಎಚ್ಡಿ ಕೋಟೆ, ಹುಣಸೂರು, ಅರಕಲಗೂಡು, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ.
ಕೃಷ್ಣರಾಜಪೇಟೆ, ಕೆಆರ್ ನಗರ, ಹಿಡಕಲ್, ಸಂಕೇಶ್ವರ, ಇಂಡಿ, ಗೋಕಾಕ್, ಜೋಯ್ಡಾ, ಮಂಕಿ, ಕುಂದಾಪುರ, ಸಿದ್ದಾಪುರ, ಅಥಣಿ, ಹುಂಚದಕಟ್ಟೆ, ಕೋಣನೂರು, ಬೇಗೂರು, ಚನ್ನರಾಯಪಟ್ಟಣ, ನಾಗಮಂಗಲ, ಶ್ರೀರಂಗಪಟ್ಟಣ, ಅಜ್ಜಂಪುರ, ಮದ್ದೂರು, ಇಳಕಲ್, ಕುಮಟಾ, ಬನವಾಸಿ, ಮಾನ್ವಿ, ಕಿರವತ್ತಿ, ಆಲಮಟ್ಟಿ, ಸಿಂಧನೂರು, ಶಾಹಪುರ್, ಮಹಾಲಿಂಗಪುರ, ಬಸವನಬಾಗೇವಾಡಿ, ಹಾವೇರಿ, ರಬಕವಿ, ಭಾಲ್ಕಿ, ಹಳಿಯಾಳ, ಮುದಗಲ್, ಕಡೂರು, ತರೀಕೆರೆ, ಬೆಳ್ಳೂರು, ಕನಕಪುರ, ಕಿಬ್ಬನಹಳ್ಳಿ, ತರೀಕೆರೆ, ಕುಣಿಗಲ್, ಹೊನ್ನಾಳಿ, ಹಗರಿಬೊಮ್ಮನಹಳ್ಳಿಯಲ್ಲಿ ಮಳೆಯಾಗಿದೆ.
ರಾಯಚೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.ಬೆಂಗಳೂರಿನ ಎಚ್ಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.