Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

“ಮೂಡುಬಿದಿರೆ: 19ನೇ ರಾಷ್ಟ್ರಮಟ್ಟದ ಫ್ಲೋರ್‌ಬಾಲ್ ಚಾಂಪಿಯನ್‌ಷಿಪ್‌ಗೆ ಮಹಾವೀರ ಕಾಲೇಜಿನ ವಿದ್ಯಾರ್ಥಿನಿ ವಿಕ್ರೀತಾ ಆಯ್ಕೆ”

Spread the love

ಕುಂದಾಪುರ: ಸಮೀಪದ ಕರ್ಕುಂಜೆ ಗ್ರಾಮದ ಹಂದಕುಂದ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಯೊಂದು ಬೆಂಕಿಗೆ ಆಹುತಿಯಾಗಿರುವ ದುರ್ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ. ಗಣಪು ಶೆಡ್ತಿ ಎಂಬುವವರಿಗೆ ಸೇರಿದ ಈ ಮನೆಯಲ್ಲಿದ್ದ ಚಿನ್ನಾಭರಣ, ನಗದು, ಟಿವಿ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಬಟ್ಟೆಬರೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಘಟನೆಯ ವೇಳೆ ಗಣಪು ಶೆಡ್ತಿ ಮತ್ತು ಅವರ ಮೊಮ್ಮಗ ಹತ್ತಿರದ ಮನೆಯಲ್ಲಿ ಭಜನಾ ಕಾರ್ಯಕ್ರಮಕ್ಕೆ ತೆರಳಿದ್ದರಿಂದ ಭಾರಿ ಪ್ರಾಣಾಪಾಯ ತಪ್ಪಿದೆ.

ತಡರಾತ್ರಿಗೆ ದಾರಿಯಲ್ಲಿ ಹೋಗುತ್ತಿದ್ದವರು ಬೆಂಕಿಯನ್ನು ಗಮನಿಸಿ ಮಾಹಿತಿ ನೀಡಿದ್ದು, ಅಷ್ಟರಲ್ಲಾಗಲೇ ಮನೆಯ ಬಹುತೇಕ ಭಾಗ ಹಾನಿಗೊಳಗಾಗಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಕುಂದಾಪುರ ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಬೆಂಕಿ ಪಕ್ಕದ ದನದ ಕೊಟ್ಟಿಗೆಗೆ ಹರಡದಂತೆ ತಡೆದಿದ್ದಾರೆ. ಈ ಅಗ್ನಿ ಅವಘಡದಿಂದ ಸುಮಾರು 5 ಲಕ್ಷ ರೂಪಾಯಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *