Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನಿಗಮಕ್ಕೆ ಕನ್ನ ಹಾಕುತ್ತಿದ್ದ ಹತ್ತಕ್ಕೂ ಹೆಚ್ಚು ಕಂಡಕ್ಟರ್‌ಗಳು ಅಂದರ್

Spread the love

ಬೆಂಗಳೂರು: ಬಿಎಂಟಿಸಿ (BMTC) ಬಸ್​​ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ನಿಗಮವು ಯುಪಿಐ ಸ್ಕ್ಯಾನರ್​​ಗಳನ್ನು ಹಾಕಿದೆ. ಆದರೆ ಕೆಲ ಕಿಲಾಡಿ ಕಂಡಕ್ಟರ್​​ಗಳು ಬಿಎಂಟಿಸಿ ಬಸ್​​​​ನಲ್ಲಿರುವ ಯುಪಿಐ ಸ್ಕ್ಯಾನರ್​​​ಗಳನ್ನು ಕಿತ್ತು, ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್​​​ಗಳನ್ನು (UPI Scanner) ನೀಡಿ, ತಮ್ಮ ಬ್ಯಾಂಕ್ ಅಕೌಂಟ್​​ಗೆ ಲಕ್ಷಾಂತರ ರೂಪಾಯಿ ಹಣ ಹಾಕಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಕನ್ನಡ ಬಾರದವರಿಗೆ ತಮ್ಮ ಮೊಬೈಲ್ ಯುಪಿಐ ಸ್ಕ್ಯಾನರ್ ನೀಡಿ ಹಣ ಪೀಕಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳಿವೆ.

ತನಿಖೆಯಲ್ಲಿ ಬಯಲಾಯ್ತು ಬಿಎಂಟಿಸಿ ಬಸ್ ಕಂಡಕ್ಟರ್​​ಗಳ ಕಳ್ಳಾಟ

ಇದೀಗ ತನಿಖೆ ವೇಳೆ ಕೂಡ, ಕಂಡಕ್ಟರ್​​ಗಳ ಕಳ್ಳಾಟ ಬಯಲಾಗಿದೆ. ಪ್ರತಿಯೊಬ್ಬರ ಅಕೌಂಟ್​ನಲ್ಲೂ ಸುಮಾರು 50 ಸಾವಿರಕ್ಕೂ ಹೆಚ್ಚು ಹಣ ಪ್ರಯಾಣಿಕರಿಂದ ಹಾಕಿಸಿಕೊಂಡಿರುವುದು ಬಯಲಿಗೆ ಬಂದಿದೆ.

ವಂಚನೆ ಎಸಗಲು ಉಪಯೋಗಿಸುವ ತಂತ್ರ ಇದುವೇ ನೋಡಿ!

ಶಕ್ತಿ ಯೋಜನೆಯ ಉಚಿತ ಟಿಕೆಟ್ ಮೇಲೆ ಕನ್ನಡದಲ್ಲಿ ಮಾತ್ರ ‘ಉಚಿತ ಟಿಕೆಟ್’ ಎಂದು ಪ್ರಿಂಟ್ ಮಾಡಲಾಗಿದೆ. ಇಂಗ್ಲಿಷ್​ನಲ್ಲಿ‘ಫ್ರೀ ಟಿಕೆಟ್’ ಎಂದು ಪ್ರಿಂಟ್ ಮಾಡಿಲ್ಲ. ಇದನ್ನು ಬಂಡವಾಳ ಮಾಡಿಕೊಂಡು ಕನ್ನಡ ಬಾರದ ಉತ್ತರ ಭಾರತದ ಹಾಗೂ ದಕ್ಷಿಣ ಭಾರತದ ಇತರ ರಾಜ್ಯಗಳ ಜನರಿಗೆ ಶಕ್ತಿ ಯೋಜನೆಯ ಟಿಕೆಟ್ ನೀಡುವ ಕಂಡಕ್ಟರ್​​ಗಳು ಅವರಿಂದ ವೈಯಕ್ತಿಕ ಯುಪಿಐ ಸ್ಕ್ಯಾನರ್​ಗೆ ದುಡ್ಡು ಹಾಕಿಸಿಕೊಳ್ಳುತ್ತಾರೆ.

ಈ ಕಿಲಾಡಿ ಕಂಡಕ್ಟರ್​​ಗಳು ಡಿಪೋದಿಂದ ಬಸ್​ಗಳು ಹೊರಗೆ ಬರುತ್ತಿದ್ದಂತೆಯೇ ಬಸ್​​​ನಲ್ಲಿರುವ ಬಿಎಂಟಿಸಿ ನಿಗಮದ ಯುಪಿಐ ಸ್ಕ್ಯಾನರ್​​ಗಳನ್ನು ಕಿತ್ತು ಇಟ್ಟುಕೊಳ್ಳುತ್ತಾರೆ. ಪ್ರಯಾಣಿಕರು ಯುಪಿಐ ಪೇಮೆಂಟ್ ಮಾಡಿ ಟಿಕೆಟ್ ಖರೀದಿ ಮಾಡಬೇಕು ಎಂದು ಕಂಡಕ್ಟರ್​​ಗಳ ಬಳಿ ಕೇಳಿದಾಗ, ತಮ್ಮ ಮೊಬೈಲ್​​ನಲ್ಲಿರುವಸ್ಕ್ಯಾನರ್​​​ಗಳನ್ನು ನೀಡಿ ಪ್ರಯಾಣಿಕರಿಂದ ಸ್ವಂತ ಬ್ಯಾಂಕ್ ಖಾತೆಗೆ ಹಣ ಹಾಕಿಸಿಕೊಳ್ಳುತ್ತಿದ್ದಾರೆ.

ಈ ಬಗ್ಗೆ ಆರೋಪ ಕೇಳಿ ಬಂದ ಹಿನ್ನೆಲೆ ಬಿಎಂಟಿಸಿಯ ಸೆಕ್ಯೂರಿಟಿ ಅಧಿಕಾರಿಗಳು ತಪಾಸಣೆ ಮಾಡಿದಾಗ ಹತ್ತಕ್ಕೂ ಹೆಚ್ಚು ಕಂಡಕ್ಟರ್​ಗಳು ಸಿಕ್ಕಿಹಾಕಿಕೊಂಡಿದ್ದಾರೆ. ಪ್ರತಿಯೊಬ್ಬರ ಅಕೌಂಟ್​​​ನಲ್ಲಿ 50 ಸಾವಿರ ರೂಪಾಯಿವರೆಗೆ ಯುಪಿಐ ಮಾಡಿಸಿಕೊಂಡಿರುವುದು ಬಯಲಾಗಿದೆ. ಈಗಾಗಲೇ ಬಿಎಂಟಿಸಿ ಸೆಕ್ಯೂರಿಟಿ ಅಧಿಕಾರಿಗಳು ಈ ಮಾಹಿತಿಯನ್ನು ಬಿಎಂಟಿಸಿ ಎಂಡಿ ಶಿವಕುಮಾರ್​ಗೆ ಸಲ್ಲಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *