ದೊಡ್ಡಬಳ್ಳಾಪುರದಲ್ಲಿ ವಿದ್ಯುತ್ ಸ್ಪರ್ಶಿಸಿ ತಾಯಿ-ಮಗ ಸ್ಥಳದಲ್ಲೇ ಸಾವು; ಮಗಳು ಪಾರು

ಮೈಸೂರು : ರಾಜ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ತಂತಿ ತಗುಲಿ ತಾಯಿ, ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಎಮ್ಮೆ ಕೊಪ್ಪಲು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ, ಮಗ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಯಿ ನೀಲಮ್ಮ (39), ಹರೀಶ್ (19) ಮೃತ ದುರ್ದೈವಿಗಳು.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಾಯಿಗೆ ವಿದ್ಯುತ್ ತಂತಿ ತಗುಲಿದೆ. ತಾಯಿ ರಕ್ಷಣೆ ಮಾಡಲು ಹೋದ ಮಗ ಹರೀಶ್ ಸಹ ಕರೆಂಟ್ ಶಾಕ್ ಗೆ ಬಲಿಯಾಗಿದ್ದಾನೆ. ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಹುಣಸೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.