ಮತಾಂತರಗೊಂಡು ಪಿಯು ವಿದ್ಯಾರ್ಥಿಯನ್ನು ಮದುವೆಯಾದ 3 ಮಕ್ಕಳ ತಾಯಿ

ಉತ್ತರ ಪ್ರದೇಶ: ಮಹಿಳೆಯೊಬ್ಬಳು ಮತಾಂತರಗೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಮೂರನೇ ಮದುವೆಯಾಗಿರುವ ಘಟನೆ ಉತ್ತರ ಪ್ರದೇಶ ಅಮ್ರೋಹಾದಲ್ಲಿ ನಡೆದಿದೆ. ಆಕೆಗೆ ಈಗಾಗಲೇ ಮೂವರು ಮಕ್ಕಳಿದ್ದಾರೆ. ಮೊದಲು ಶಬ್ನಮ್ ಎಂದು ಕರೆಯಲ್ಪಡುತ್ತಿದ್ದ ಆ ಮಹಿಳೆ ಈಗ ಶಿವಾನಿ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದಾಳೆ. ಇದು ಆಕೆಗೆ ಮೂರನೇ ಮದುವೆ. ಶಿವಾನಿಯು ಪಕ್ಕದ ಮನೆಯ 12ನೇ ತರಗತಿ ವಿದ್ಯಾರ್ಥಿಯೊಂದಿಗೆ ಸಂಬಂಧ ಬೆಳೆಸಿಕೊಂಡಿದ್ದಳು, ಆಕೆ ಎರಡನೇ ಗಂಡನಿಗೆ ವಿಚ್ಛೇದನ ನೀಡಿ ಮೂವರು ಹೆಣ್ಣುಮಕ್ಕಳನ್ನು ಆತನ ಕಸ್ಟಡಿಯಲ್ಲಿ ಬಿಟ್ಟು, ಸ್ಥಳೀಯ ದೇವಸ್ಥಾನವೊಂದರಲ್ಲಿ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾಳೆ.
ಕೆಲವು ದಿನಗಳ ಹಿಂದೆ ಎರಡೂ ಕುಟುಂಬಗಳ ನಡುವೆ ಪಂಚಾಯಿತಿ ನಡೆದಿತ್ತು, ಮಹಿಳೆ ವಯಸ್ಕಳಾಗಿರುವುದರಿಂದ ಅವಳು ಬಯಸಿದ ಸ್ಥಳದಲ್ಲಿ ವಾಸಿಸಲು ಸ್ವತಂತ್ರಳು ಎಂದು ನಿರ್ಧರಿಸಲಾಯಿತು. ಶಿವಾನಿ ತನ್ನ ಸ್ವಂತ ಇಚ್ಛೆಯಿಂದ ಮದುವೆಯಾಗಿದ್ದು, ತನ್ನ ನಿರ್ಧಾರದಿಂದ ತೃಪ್ತಳಾಗಿದ್ದಾಳೆ ಎಂದು ಹೇಳಿದರು. ವಿದ್ಯಾರ್ಥಿ ಕೂಡ ಅದನ್ನೇ ಹೇಳಿದ್ದು, ತಾವು ಸಂತೋಷವಾಗಿದ್ದೇವೆ ಮತ್ತು ಹಸ್ತಕ್ಷೇಪ ಬಯಸುವುದಿಲ್ಲ ಎಂದು ಹೇಳಿದ್ದಾನೆ.