ಢಾಬಾದಲ್ಲಿ ಬ್ಲಾಂಕೆಟ್ ಸುತ್ತಿದ ಸ್ಥಿತಿಯಲ್ಲಿ ಎಂಎಸ್ಸಿ ವಿದ್ಯಾರ್ಥಿನಿ ಶವ ಪತ್ತೆ

ಲಕ್ನೋ: ಉತ್ತರ ಪ್ರದೇಶದ ಮಿರ್ಜಾಮುರಾದ್ ಪ್ರದೇಶದ ಢಾಬಾ ಒಂದರಲ್ಲಿ ಯುವತಿಯೊಬ್ಬಳ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

ಢಾಬಾದಲ್ಲಿ ಎಂಎಸ್ಸಿ ವಿದ್ಯಾರ್ಥಿನಿ (Student) ಅಲ್ಕಾ ಬಿಂದ್ (22) ಮೃತದೇಹ ಗಂಟಲು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕಾಲೇಜಿಗೆ ತೆರಳಿದ್ದ ನಾಪತ್ತೆಯಾದ ವರದಿಯಾದ ಕೆಲವೇ ಗಂಟೆಗಳ ಆಕೆಯ ಶವ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಭದೋಹಿಯಲ್ಲಿರುವ ತನ್ನ ಸಹೋದರಿಯ ಮನೆಯಿಂದ ಆರೋಪಿ ಸಹಾಬ್ ಬಿಂದ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಯುವತಿಯ ಮೊಬೈಲ್ ಕರೆ ದಾಖಲೆಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆತನನ್ನು ಬಂಧಿಸಲಾಗಿದೆ . ಬಂಧಿಸುವ ವೇಳೆ, ಪೊಲೀಸರಿಂದ ಗನ್ ಕಸಿದುಕೊಂಡು ಗುಂಡು ಹಾರಿಸಲು ಪ್ರಯತ್ನಿಸಿದ್ದ. ತಕ್ಷಣ ಅವನ ಕಾಲಿಗೆ ಗುಂಡು ಹಾರಿಸಿ, ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದುವೆಯ ಒತ್ತಡ ಮತ್ತು ಪದೇ ಪದೇ ಹಣಕ್ಕಾಗಿ ಬೇಡಿಕೆ ಇಟ್ಟ ಕಾರಣ ಯುವತಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.