Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮೂಡಿಗೆರೆ: ಮಾರುಕಟ್ಟೆಯಲ್ಲಿ ನಕಲಿ ನೋಟು ಚಲಾಯಿಸಲು ಯತ್ನ; ಇಬ್ಬರ ಬಂಧನ, 18,000 ರೂ. ಮೌಲ್ಯದ ಖೋಟಾ ನೋಟು ಜಪ್ತಿ!

Spread the love

ಚಿಕ್ಕಮಗಳೂರು : ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಜಾಲವೊಂದನ್ನು ಮೂಡಿಗೆರೆ ಠಾಣೆ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 200 ಮುಖಬೆಲೆಯ ಒಟ್ಟು 18,000 ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಘಟನೆಯ ವಿವರ:
ಮೂಡಿಗೆರೆ ಪಟ್ಟಣದ ನೂತನ ಲೇಔಟ್ ಪ್ರದೇಶದಲ್ಲಿ ನಕಲಿ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಹಿಡಿದಿದ್ದಾರೆ.
ಮಂಗಳೂರು ಮೂಲದ ಮಹಮ್ಮದ್ ಅಲಿ ಹಾಗೂ ಮೂಡಿಗೆರೆಯ ಸ್ಥಳೀಯ ನಿವಾಸಿ ಮಹೇಶ್ ಬಂಧಿತ ಆರೋಪಿಗಳು. ಇಬ್ಬರೂ ಆರೋಪಿಗಳ ಬಳಿ ತಲಾ 45 ರಂತೆ ಒಟ್ಟು 90 ನಕಲಿ ನೋಟುಗಳು (200 ಮುಖಬೆಲೆ) ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.

ಆರೋಪಿಗಳು ಚಲಾವಣೆ ಮಾಡಲು ತಂದಿದ್ದ ನೋಟುಗಳ ಮೇಲೆ ‘ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ’ ಎಂದು ಇರಬೇಕಾದ ಜಾಗದಲ್ಲಿ ‘ಬಿಸರ್ವ್ ಬ್ಯಾಂಕ್ ಆಫ್ ಇಂಡಿಯಾ’ ಎಂದು ಮುದ್ರಿಸಲಾಗಿತ್ತು. ಮಂಗಳೂರಿನಿಂದ ಆಗಮಿಸಿದ್ದ ಮಹಮ್ಮದ್ ಅಲಿ, ಮೂಡಿಗೆರೆಯಲ್ಲಿ ಈ ನಕಲಿ ನೋಟುಗಳನ್ನು ಮಾರಾಟ ಮಾಡಲು ಹಾಗೂ ಚಲಾವಣೆ ಮಾಡಲು ಯತ್ನಿಸುತ್ತಿದ್ದ ಎಂದು ತಿಳಿದುಬಂದಿದೆ.
ಸದ್ಯ ಮೂಡಿಗೆರೆ ಪೊಲೀಸರು ಇಬ್ಬರೂ ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ನಕಲಿ ನೋಟುಗಳನ್ನು ಜಪ್ತಿ ಮಾಡಿದ್ದಾರೆ. ಈ ಕುರಿತು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಜಾಲದ ಹಿಂದೆ ಇನ್ನು ಯಾರಿದ್ದಾರೆ ಹಾಗೂ ನಕಲಿ ನೋಟುಗಳ ಮುದ್ರಣ ಎಲ್ಲಿ ನಡೆಯುತ್ತಿತ್ತು ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *