Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

“ಮೂಲ್ಕಿ: ಶಾಲಾ ಬಸ್ಸಿಗೆ ಟೂರಿಸ್ಟ್ ವಾಹನ ಭೀಕರ ಡಿಕ್ಕಿ – ಕಮರಿಗೆ ಉರುಳಿದ ಬಸ್, ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ!”

Spread the love

ಮೂಲ್ಕಿ ಅಕ್ಟೋಬರ್ 23: ಶಾಲಾ ಬಸ್ಸಿಗೆ ಟೂರಿಸ್ಟ್ ವಾಹನವೊಂದು ಹಿಂಬದಿಯಿಂದ ಭೀಕರವಾಗಿ ಢಿಕ್ಕಿ ಹೊಡೆದ ಪರಿಣಾಮ ಬಸ್ ರಸ್ತೆ ಬದಿಯ ಕಮರಿಗೆ ಉರುಳಿ ಬಿದ್ದಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಸಮೀಪದ ಕೊಲ್ನಾಡುವಿನಲ್ಲಿ ಶುಕ್ರವಾರ ಅಕ್ಟೋಬರ್ 23 ಸಂಜೆ ಸಂಭವಿಸಿದೆ.

ಅಪಘಾತದಲ್ಲಿ ಬಸ್ಸಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಚಾಲಕ ಹಾಗೂ ಇತರೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಂಗಳೂರಿನ ಕುಳಾಯಿ ಮೂಲದ ಖಾಸಗಿ ಶಾಲೆಗೆ ಸೇರಿದ ಬಸ್ ಇದಾಗಿದೆ. ಕೊಲ್ನಾಡುಗುತ್ತು ಬಳಿ ಈ ದುರಂತ ನಡೆದಿದೆ. ಶಾಲಾ ಬಸ್ ಕೊಲ್ನಾಡುವಿನಲ್ಲಿ ಯೂ-ಟರ್ನ್ ತೆಗೆದುಕೊಂಡು ವಿದ್ಯಾರ್ಥಿನಿಯೊಬ್ಬಳನ್ನು ಇಳಿಸಿ ಮುಂದೆ ಸಾಗುತ್ತಿದ್ದ ವೇಳೆ, ಹಿಂಬದಿಯಿಂದ ಅತಿ ವೇಗವಾಗಿ ಬಂದ ತಮಿಳುನಾಡು ನೋಂದಾಯಿತ ಟೂರಿಸ್ಟ್ ವಾಹನ ಬಸ್ಸಿಗೆ ಸಜೆಸಹಿತ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ಭೀಕರ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ ರಸ್ತೆ ಪಕ್ಕದಲ್ಲಿದ್ದ ಆಳವಾದ ಕಮರಿಗೆ ಉರುಳಿ ಬಿದ್ದಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತ ಸಂಭವಿಸಿದ ಸಮಯದಲ್ಲಿ ಶಾಲಾ ಬಸ್ಸಿನಲ್ಲಿ ಒಟ್ಟು 17 ಮಂದಿ ವಿದ್ಯಾರ್ಥಿಗಳಿದ್ದರು. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ತೀವ್ರ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕ ಹಾಗೂ ಟೂರಿಸ್ಟ್ ವಾಹನದ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಸ್ಥಳೀಯರು ತಕ್ಷಣವೇ ಧಾವಿಸಿ ಬಸ್ಸಿನಲ್ಲಿದ್ದ ಮಕ್ಕಳನ್ನು ಹೊರತೆಗೆದು ರಕ್ಷಣಾ ಕಾರ್ಯ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *