Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಲ್ಟಿಪ್ಲೆಕ್ಸ್ ಟಿಕೆಟ್ ದರ ವಿವಾದ: ಪ್ರೇಕ್ಷಕರಿಗೆ ಟಿಕೆಟ್‌ಗಳನ್ನು ಕಾಯ್ದಿರಿಸಲು ಸರ್ಕಾರದ ಮನವಿ

Spread the love

ಬೆಂಗಳೂರು: ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡಿದ್ರೆ ಟಿಕೆಟ್ ಗಳನ್ನ ಭದ್ರವಾಗಿ ಇಟ್ಟುಕೊಳ್ಳಬೇಕು. ಮಲ್ಟಿಪ್ಲೆಕ್ಸ್ ಟಿಕೆಟ್ ದರ ತಡೆಯಾಜ್ಞೆಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಪ್ರೇಕ್ಷಕರಿಗೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ಚಲನಚಿತ್ರ ಪ್ರದರ್ಶನಕ್ಕೆ ನೀಡಿರುವ ಟಿಕೆಟ್ ದರಕ್ಕೆ ಸಂಬಂಧಿಸಿದಂತೆ ಭೌತಿಕವಾಗಿ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಪಡೆದ ಟಿಕೆಟ್‌ಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಮಾಲೀಕರು ಎಲ್ಲಾ ರೀತಿಯಾ ಸಿನಿಮಾ ಟಿಕೆಟ್ ಮಾರಾಟದ ಸಂಪೂರ್ಣ ದಾಖಲೆಗಳನ್ನ ಇಡಬೇಕೆಂದು ಆದೇಶಿಸಿದೆ

ಮಲ್ಟಿಪ್ಲೆಕ್ಸ್‌ನಲ್ಲಿ ಟಿಕೆಟಿಗೆ ಗರಿಷ್ಠ 200 ರೂ. ನಿಗದಿ ಮಾಡಿದ ಪ್ರಕರಣದಲ್ಲಿ ಹೈಕೋರ್ಟ್ ಅಂತಿಮ ಆದೇಶದಲ್ಲಿ ಅರ್ಜಿದಾರರಿಗೆ ಹಿನ್ನಡೆಯಾದಲ್ಲಿ, ಗ್ರಾಹಕರಿಂದ ಸಂಗ್ರಹವಾದ ಹೆಚ್ಚುವರಿ ಮೊಬಲಗನ್ನು ಅವರುಗಳು ಪಾವತಿಸಿದ ವಿಧಾನದಲ್ಲಿಯೇ ಹಿಂದಿರುಗಿಸಬೇಕಾಗುತ್ತೆ. ಹಾಗಾಗಿ ರಾಜ್ಯ ಹಾಗೂ ಗ್ರಾಹಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮೇಲಿನ ನಿರ್ದೇಶನಗಳನ್ನು ನೀಡಿರುತ್ತದೆ ಅಂತಾ ಸರ್ಕಾರ ಸ್ಪಷ್ಟಪಡಿಸಿದೆ


Spread the love
Share:

administrator

Leave a Reply

Your email address will not be published. Required fields are marked *