Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮೈಸೂರು ದಸರಾ ಉದ್ಘಾಟಕಿ ಬಾನು ಮುಷ್ತಾಕ್ ಭಾಷಣದ ವಿಡಿಯೋ ವೈರಲ್: ವಿವಾದಕ್ಕೆ ಕಾರಣವಾದ ಬರಹಗಾರ್ತಿಯ ಹಳೆಯ ಹೇಳಿಕೆಗಳು

Spread the love

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರು ಬುಕ‌ರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರ ಹೆಸರನ್ನು ಘೋಷಿಸಿದ್ದು, ಇದರ ಬೆನ್ನಲ್ಲೇ ಜನ ಸಾಹಿತ್ಯ ಸಮ್ಮೇಳನ -2023ರಲ್ಲಿ ಬಾನು ಮುಷ್ತಾಕ್ ರವರು ಮಾಡಿರುವ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಈ ವಿಡಿಯೋವನ್ನು ಹಂಚಿಕೊಂಡಿಕೊಂಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ ಬೂಕರ್ ಭಾನು? ಎಂದು ಪ್ರಶ್ನಿಸಿದ್ದಾರೆ.

ಇದೇ ವಿಡಿಯೋವನ್ನು ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ಅವರೂ ಹಂಚಿಕೊಂಡಿದ್ದು, ಕನ್ನಡ ಭುವನೇಶ್ವರಿಯನ್ನು ಸಹಿಸಲಾಗದವರು ಚಾಮುಂಡಿ ತಾಯಿಯ ವೈಭವಕ್ಕೆ ತಲೆಬಾಗಲು ಒಪ್ಪಿದ್ದಾದರೂ ಏಕೆ? ಎಂದು ಪ್ರಶ್ನಿಸಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ಬಾನು ಮುಷ್ತಕ್ ಅವರು, ಬಿಳಿಮಿಲೆ ಅವರು, ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಮಾತನಾಡಿದರು. ಒಬ್ಬ ಅಲ್ಪ ಸಂಖ್ಯಾತ ಮಹಿಳೆಯಾಗಿ ನನ್ನ ಗ್ರಹಿಕೆ ಏನು ಎಂಬುದನ್ನು ನಿಮ್ಮ ಮುಂದಿಡುತ್ತಿದ್ದೇನೆ. ನಿಮಗೆ ಇಷ್ಟ ಆಗುತ್ತೋ, ಕಷ್ಟ ಆಗುತ್ತೋ ನನಗೆ ಗೊತ್ತಿಲ್ಲ. ಕನ್ನಡವನ್ನು ಭಾಷೆಯಾಗಿ ಬೆಳೆಯಲು, ಕನ್ನಡವನ್ನು ಭಾಷೆಯಾಗಿ ಬಾನು ಮುಷ್ತಾಕ್ ಮಾತನಾಡುವುದಕ್ಕೆ, ಆಕೆಯ ಮನೆಯವರು ಮಾತನಾಡುವುದಕ್ಕೆ ನೀವು ಅವಕಾಶವನ್ನೇ ನೀಡಿಲಿಲ್ಲ ಎಂದು ಹೇಳಿರುವುದು ಕಂಡು ಬಂದಿದೆ.


Spread the love
Share:

administrator

Leave a Reply

Your email address will not be published. Required fields are marked *