Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮೈಸೂರು ಅರಮನೆಗೆ ನಟಿ ಕಾಜಲ್ ಅಗರ್ವಾಲ್ ಭೇಟಿ: ದಸರಾ ಸಿದ್ಧತೆಗಳ ನಡುವೆ ಪ್ರಸಿದ್ಧ ತಾಣ ವೀಕ್ಷಣೆ!

Spread the love

ಮೈಸೂರು: ದಸರಾ ಆಗಮನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಮೈಸೂರು ಅರಮನೆಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಈ ನಡುವೆ ನಟಿ ಕಾಜಲ್ ಅಗರ್ವಾಲ್ (Kajal Aggarwal) ಮೈಸೂರು ಅರಮನೆಗೆ ಭೇಟಿ ನೀಡಿದ್ದಾರೆ.ಅರಮನೆಗೆ ಆಗಮಿಸಿದ ಕಾಜಲ್ ಅಗರ್ವಾಲ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ವೇಳೆ ಅರಮನೆಯ ಇತಿಹಾಸ ಮತ್ತು ಮಹತ್ವದ ಬಗ್ಗೆ ಅಧಿಕಾರಿಗಳು ನಟಿಗೆ ವಿವರಿಸಿದರು. ಇದಕ್ಕಾಗಿ ಕಾಜಲ್ ಅಗರ್ವಾಲ್ ಅವರು ಧನ್ಯವಾದ ಅರ್ಪಿಸಿದರು.

ಅರಮನೆಯ ವೈಭವಕ್ಕೆ ಕಾಜಲ್ ಅಗರ್ವಾಲ್ ಕಣ್ತುಂಬಿಕೊಂಡರು. ನಟಿ ಅರಮನೆಗೆ ಭೇಟಿ ನೀಡಿರುವ ವಿಷಯ ತಿಳಿಯುತ್ತಿದ್ದಂತೆ ಅವರನ್ನು ನೋಡಲು ಪ್ರವಾಸಿಗರು ಹಾಗೂ ಅಭಿಮಾನಿಗಳು ಮುಗಿಬಿದ್ದರು.ನೆಚ್ಚಿನ ನಟಿಯೊಂದಿಗೆ ಫೋಟೋ ಹಾಗೂ ಸೆಲ್ಫಿ ಕ್ಲಿಕ್ಕಿಸಿಕೊಂಡು ಅಭಿಮಾನಿಗಳು ಸಂಭ್ರಮಿಸಿದರು.


Spread the love
Share:

administrator

Leave a Reply

Your email address will not be published. Required fields are marked *