Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆ ಬ್ರದರ್ಸ್‌ ಹೆಸರು ಇಡಿ ಚಾರ್ಜ್‌ಶೀಟ್‌ನಲ್ಲಿ 2.5 ಕೋಟಿ ದೇಣಿಗೆಯ ಆರೋಪ

Spread the love

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಈಗ ಡಿಕೆ ಬ್ರದರ್ಸ್‌ ಬುಡಕ್ಕೆ ಬಂದಿದೆ. ಯಂಗ್‌ ಇಂಡಿಯಾಗೆ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ 2.5 ಕೋಟಿ ರೂ. ದೇಣಿಗೆ ನೀಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಕೋರ್ಟ್‌ಗೆ ಹೆಚ್ಚುವರಿ ಚಾರ್ಜ್‌ಶೀಟ್‌ ಸಲ್ಲಿಸಿದೆ. ಹೆಚ್ಚುವರಿ ಜಾರ್ಜ್‌ಶೀಟ್‌ನಲ್ಲಿ ಡಿಕೆ ಬ್ರದರ್ಸ್‌ ಹೆಸರು ಉಲ್ಲೇಖವಾಗಿದೆ.ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ದೇಣಿಗೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ದೇಣಿಗೆ ನೀಡಲಾಗಿದೆ ಎಂದು ಇಡಿ ಆರೋಪಿಸಿದೆ. 

ಯಂಗ್ ಇಂಡಿಯನ್‌ ಲಿಮಿಟೆಡ್‌ ಮೂಲಕ 2,000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸೋನಿಯಾ ಮತ್ತು ರಾಹುಲ್‌ ಅವರು ಕೇವಲ 50 ಲಕ್ಷ ರೂ.ಗೆ ಖರೀದಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಎಜೆಎಲ್‌ಗೆ ನೀಡಿದ್ದ 90.2 ಕೋಟಿ ರೂ. ಸಾಲವನ್ನು 9.02 ಕೋಟಿಯ ಈಕ್ವಿಟಿ ಷೇರುಗಳನ್ನಾಗಿ ಪರಿವರ್ತಿಸಿ ಯಂಗ್‌ ಇಂಡಿಯನ್‌ಗೆ ವರ್ಗಾಯಿಸಲಾಗಿದೆ ಎಂದು ಇ.ಡಿ. ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ.


Spread the love
Share:

administrator

Leave a Reply

Your email address will not be published. Required fields are marked *