ರಾಷ್ಟ್ರೀಯ ಹೆದ್ದಾರಿ 75: ಸೂರಿಕುಮೇರು ಬಳಿ ಕಾರು ಪಲ್ಟಿ; ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ ಆರು ಮಂದಿ ಪಾರು!

ಬಂಟ್ವಾಳ: ಕಾರು ಪಲ್ಟಿಯಾಗಿ ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರು ಸಣ್ಣಪುಟ್ಟ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಸೂರಿಕುಮೇರು ಬಳಿ ಗುರುವಾರ ಸಂಜೆ ನಡೆದಿದೆ

ವರದಿ ಪ್ರಕಾರ, ಕುಟುಂಬವು ಮಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ಪ್ರಯಾಣಿಸುತ್ತಿದ್ದಾಗ, ಸೂರಿಕುಮೇರುವಿನ ಹಿಂದೂಸ್ತಾನ್ ಪೆಟ್ರೋಲಿಯಂ ಇಂಧನ ಕೇಂದ್ರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.ಆರು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.ಹೆದ್ದಾರಿಯಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ ಮತ್ತು ಕಳಪೆ ರಸ್ತೆ ಪರಿಸ್ಥಿತಿಯಿಂದಾಗಿ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಸಮರ್ಪಕ ರಸ್ತೆ ವಿನ್ಯಾಸದಿಂದಾಗಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.