ಜಾರಿಗೆಯಾಗಲಿರುವ ವಿಶ್ವದ ಅತಿ ಉದ್ದ ಮತ್ತು ಅತ್ಯಧಿಕ ಸಾಮರ್ಥ್ಯದ ರೈಲು ,ಭಾರತದ ಮೊದಲ ಹೈಡ್ರೋಜನ್ ರೈಲು – ಅಶ್ವಿನಿ ವೈಷ್ಣವ್

ನವದೆಹಲಿ: ದೇಶದ ಮೊದಲ ಹೈಡ್ರೋಜನ್ ರೈಲನ್ನು ಅಭಿವೃದ್ಧಿಪಡಿಸಲು ಭಾರತೀಯ ರೈಲ್ವೇ ಅತ್ಯಾಧುನಿಕ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಇದು ವಿಶ್ವದ ಅತಿ ಉದ್ದದ ಮತ್ತು ಗರಿಷ್ಠ ಸಾಮರ್ಥ್ಯದ ಹೈಡ್ರೋಜನ್ ರೈಲುಗಳಲ್ಲಿ ಒಂದಾಗಿರಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಸಂಪೂರ್ಣವಾಗಿ ದೇಶೀಯವಾಗಿ ಅಭಿವೃದ್ಧಿಪಡಿಸಲಾದ ಈ ರೈಲನ್ನು ರಿಸರ್ಚ್ ಡಿಸೈನ್ ಮತ್ತು ಸ್ಟ್ಯಾಂಡರ್ಡ್ಸ್ ಆರ್ಗನೈಸೇಶನ್ (ಆರ್‌ಡಿಎಸ್‌ಒ) ಸಿದ್ಧಪಡಿಸಿದೆ. ಪೆಟ್ರೋಲಿಯಂ ಮತ್ತು ಸ್ಫೋಟಕಗಳ ಸುರಕ್ಷತಾ ಸಂಸ್ಥೆ (ಪಿಇಎಸ್‌ಒ)ಯಿಂದ ಅಗತ್ಯ ಸುರಕ್ಷತಾ ಅನುಮೋದನೆಗಳು ಜಾರಿಯಲ್ಲಿವೆ’ ಎಂದು ಅವರು ಮಾಹಿತಿ ನೀಡಿದರು.
