Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನೀಟ್ ಹಗರಣ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ ನಟಿ ಜ್ಯೋತಿಕಾ!

Spread the love

ನವದೆಹಲಿ: ನೀಟ್ (NEET) ಪರೀಕ್ಷೆ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಮುಗಿಲು ಮುಟ್ಟಿರುವ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಖ್ಯಾತ ಬಹುಭಾಷಾ ನಟಿ ಜ್ಯೋತಿಕಾ ಆಗ್ರಹಿಸಿದ್ದಾರೆ. ಈ ಕುರಿತು ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿರುವ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ತಮ್ಮ ಇನ್‌ಸ್ಟಾಗ್ರಾಂ ಸಂದೇಶದಲ್ಲಿ ನೇರವಾಗಿಯೇ ಸಚಿವರಿಗೆ ಸವಾಲೆಸೆದಿರುವ ಜ್ಯೋತಿಕಾ, “ಧರ್ಮೇಂದ್ರ ಪ್ರಧಾನ್ ಅವರೇ, ಹುದ್ದೆಯಿಂದ ಕೆಳಗಿಳಿಯಿರಿ. ತಕ್ಷಣವೇ ನಿಮ್ಮ ರಾಜೀನಾಮೆ ನೀಡಿ. ನಾನು ವಿದ್ಯಾರ್ಥಿಗಳು ಮತ್ತು ನಮ್ಮ ದೇಶದ ಭವಿಷ್ಯದ ಪರವಾಗಿದ್ದೇನೆ. ನಾನು ಹೊಣೆಗಾರಿಕೆ, ಪ್ರಜಾಪ್ರಭುತ್ವ ಭಾರತ ಹಾಗೂ ಸುಧಾರಿತ ಶಿಕ್ಷಣ ವ್ಯವಸ್ಥೆಯ ಪರವಾಗಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

ಇದೇ ವೇಳೆ, ದೇಶದ ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ಉಪವಾಸ ಸತ್ಯಾಗ್ರಹ ನಡೆಸಿದ ಪ್ರಖ್ಯಾತ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್‌, ವಿದ್ಯಾರ್ಥಿ ಹೋರಾಟಗಾರರಾದ ಅಭಿಜೀತ್ ದೀಪ್ಕೆ ಹಾಗೂ ಸೌರವ್ ದಾಸ್ ಅವರ ಧೈರ್ಯವನ್ನು ಜ್ಯೋತಿಕಾ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. “ತಾಯಂದಿರಾಗಿ ನಮ್ಮ ಮಕ್ಕಳನ್ನು ನಿಮ್ಮಂತೆಯೇ ಧೈರ್ಯವಂತರನ್ನಾಗಿ ಬೆಳೆಸಲು ನಾವು ಬಯಸುತ್ತೇವೆ. ಯಾವುದೇ ಮುಚ್ಚುಮರೆಯಿಲ್ಲದೆ ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ವ್ಯಕ್ತಪಡಿಸುವ ‘ಜೆನ್ ಝೆಡ್’ ಪೀಳಿಗೆಯ ಬಗ್ಗೆ ನಮಗೆ ತೀವ್ರ ಹೆಮ್ಮೆ ಇದೆ. ಎಲ್ಲರೂ ಒಗ್ಗೂಡಿ ‘ನಾವೇ ಭಾರತ’ ಎಂಬುದನ್ನು ನೀವು ಸಾಬೀತುಪಡಿಸಿದ್ದೀರಿ. ಭಯದ ವಾತಾವರಣವನ್ನು ಮುರಿದು ಜನರಲ್ಲಿ ನಿರ್ಭೀತಿ ಮೂಡಿಸಿದ್ದಕ್ಕಾಗಿ ನಿಮಗೆ ಧನ್ಯವಾದಗಳು” ಎಂದು ನಟಿ ಜ್ಯೋತಿಕಾ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *