ನೆಲಮಂಗಲ: ಲಾರಿ ಡಿಕ್ಕಿ, ಬೈಕ್ನಲ್ಲಿದ್ದ ಇಬ್ಬರು ಡ್ಯಾನ್ಸರ್ಗಳು ಸ್ಥಳದಲ್ಲೇ ಸಾವು

ನೆಲಮಂಗಲ, ಜೂನ್ 16: ಲಾರಿ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್ನಲ್ಲಿ ನಡೆದಿದೆ. ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್(22) ಮತ್ತು ಸಹನಾ(21) ಮೃತರು. ಲಾರಿ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಪ್ರಜ್ವಲ್ ಕೆಲವು ಸಿನಿಮಾ ಮತ್ತು ಇವೆಂಟ್ಗಳಲ್ಲಿ ನೃತ್ಯ ಮಾಡಿದ್ದಾರೆ. ಸಹನಾ ಕೂಡ ಡ್ಯಾನ್ಸರ್ ಆಗಿದ್ದಾರೆ. ಇಬ್ಬರು ಮದುವೆ ಇವೆಂಟ್ ಒಂದನ್ನು ಮುಗಿಸಿಕೊಂಡು ಕುಣಿಗಲ್ನಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದರು. ಈ ವೇಳೆ ಭೀಕರ ಅಪಘಾತ ಸಂಭವಿಸಿದೆ.