Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನೆಲಮಂಗಲ ಯುವಕ ಹ*ಲ್ಲೆ ಪ್ರಕರಣ: ಪವಿತ್ರ ಗೌಡ ರೀತಿಯಲ್ಲಿ ಸ್ಫೋಟಕ ಪ್ಲಾನ್ ಕೊಟ್ಟ ಬಾಲಕಿ

Spread the love

ನೆಲಮಂಗಲ: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ (Nelamangala) ತಾಲೂಕಿನ ಸೋಲದೇವನಹಳ್ಳಿ ಬಳಿ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಕೇಸ್​ಗೆ ಸಂಬಂಧಿಸಿದಂತೆ ಪ್ರಕರಣದ ಸೂತ್ರಧಾರಿ 17 ವರ್ಷದ ಹುಡಗಿಯನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು, ಬಾಲಕಿಯನ್ನು ಬಂಧಿಸಿ ಕಾನೂನು ಸಂಘರ್ಷ ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದಾರೆ. ಇದೀಗ, ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ.

ಶಾಲಾದಿನಗಳಲ್ಲಿ ಅರಳಿದ ಪ್ರೀತಿ
17 ವರ್ಷದ ಹುಡಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ಯುವಕ ಕುಶಾಲ್​ನ ಪರಿಚಯವಾಗಿದೆ. ಪರಿಚಯ ಪ್ರೇಮಕ್ಕೆ ತಿರುಗಿದೆ. ಹುಡುಗಿ ಶಾಲೆ ಮುಗಿಸಿಕೊಂಡು ಕಾಲೇಜು ಮೆಟ್ಟಿಲು ಹತ್ತಿದ ಮೇಲೆ ಪ್ರೇಮಿಗಳ ನಡುವೆ ಬಿರುಕು ಮೂಡಿದೆ. ಎರಡು ವರ್ಷದ ಪ್ರೀತಿ ಕೆಲ ದಿನಗಳ ಹಿಂದೆಯಷ್ಟೇ ಬ್ರೇಕ್​ ಅಪ್​ ಆಗಿದೆ. ಬ್ರೇಕ್​ ಅಪ್​ ಆದ ಬಳಿಕ ಯುವಕ ಕುಶಾಲ್​ ಖಾಸಗಿ ಕ್ಷಣದ ಫೋಟೋಗಳನ್ನು ವೈರಲ್​ ಮಾಡುವುದಾಗಿ ಹುಡುಗಿಗೆ ಬ್ಲ್ಯಾಕ್​ ಮೇಲ್​ ಮಾಡಿದ್ದಾನೆ.

ಪವಿತ್ರಾ ಗೌಡ ರೀತಿಯೇ ಪ್ಲಾನ್ ಕೊಟ್ಟ ಬಾಲಕಿ
ಈ ವಿಚಾರವನ್ನು ಹುಡುಗಿ ತನ್ನ ಸ್ನೇಹಿತರ ಮುಂದೆ ಹೇಳಿದ್ದಾಳೆ. ಅಲ್ಲದೆ, ಕುಶಾಲ್​ನನ್ನು ಅಪಹರಿಸುವಂತೆ ಹುಡುಗಿ ತನ್ನ ಸ್ನೇಹಿತರಿಗೆ ಹೇಳಿದ್ದಾಳೆ. ಅದರಂತೆ ಹುಡುಗಿಯ ಸ್ನೇಹಿತರು, ಕುಶಾಲ್​ನನ್ನು ಸಂಪರ್ಕಿಸಿ ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಬಾ ಅಂತ ಬಾಗಲಗುಂಟೆಯ ಎಜಿಪಿ ಲೇಔಟ್​ಗೆ ಕರೆಸಿಕೊಂಡಿದ್ದಾರೆ. ಸ್ಥಳಕ್ಕೆ ಬಂದ ಯುವಕ ಕುಶಾಲ್​ನನ್ನು ಹುಡುಗಿಯ ಸ್ನೇಹಿತರು ಅಪಹರಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *