Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನೇಪಾಳ: ಹಿಮಾಲಯ ಪರ್ವತ ಶ್ರೇಣಿಯಲ್ಲಿ ಹಠಾತ್ ಪ್ರವಾಹ; ಇಡೀ ಗ್ರಾಮವೇ ಕೊಚ್ಚಿಹೋಗಿದ್ದು, 1,000 ಮಂದಿ ನಾಪತ್ತೆಯಾಗಿರುವ ಶಂಕೆ!

Spread the love

ಕಠ್ಮಂಡು: ಹಿಮಾಲಯ ಪರ್ವತ ಶ್ರೇಣಿಯಲ್ಲಿರುವ ನೇಪಾಳದಲ್ಲಿ ಹಠಾತ್ ಪ್ರವಾಹ ಉಂಟಾಗಿ ವ್ಯಾಪಕ ಹಾನಿಯಾಗಿದ್ದು, ಸುಮಾರು 1,000 ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

ನೇಪಾಳ ರಸುವಾದಲ್ಲಿ ಟಿಬೆಟ್ ಗಡಿಯ ಬಳಿಯಿರುವ ಇಡೀ ಗ್ರಾಮವೇ ಪ್ರವಾಹಕ್ಕೆ ಕೊಚ್ಚಿಹೋಗಿದ್ದು, ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿರುವ ಶಂಕೆ ಉಂಟಾಗಿದೆ. ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಪ್ರದೇಶದಲ್ಲಿ ಹಠಾತ್ ಪ್ರವಾಹ ಉಂಟಾಗಿದೆ.ನದಿ ದಂಡೆಯಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಭೋಟೆ ಕೋಶಿ ನದಿಯ ಉದ್ದಕ್ಕೂ ವಾಸಿಸುವ ನಿವಾಸಿಗಳು ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.ಸುಮಾರು 1,000 ಜನರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಲಾಗಿದೆ. ಸಾವನ್ನಪ್ಪಿದವರ ಅಂಕಿ ಅಂಶವನ್ನು ಇನ್ನೂ ಅಧಿಕೃತವಾಗಿಲ್ಲ. ರಕ್ಷಣಾ ತಂಡಗಳು ಈಗಾಗಲೇ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸುತ್ತಿವೆ.ಹಠಾತ್ ಪ್ರವಾಹದಿಂದಾಗಿ ರಸುವಾ ಜಿಲ್ಲೆ, ಸಯಾಪ್ರು ಬೆಸಿ ಮತ್ತು ತಿಮುರೆ ಪರ್ವತ ಪ್ರದೇಶಗಳಲ್ಲಿ ವ್ಯಾಪಕ ಹಾನಿಯುಂಟಾಗಿದೆ. ಪ್ರವಾಹಕ್ಕೆ ಇಲ್ಲಿನ ಕೆಲವು ಹಳ್ಳಿಗಳೇ ಕೊಚ್ಚಿಹೋಗಿವೆ. ಯೋಜನಾ ಸ್ಥಳಗಳೂ ಕೊಚ್ಚಿ ಹೋಗಿವೆ ಎಂದು ವರದಿಯಾಗಿದೆ.ಸದ್ಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿವೆ. ಪ್ರವಾಹದಲ್ಲಿ ಕೊಚ್ಚಿಹೋಗಿರುವ ಜನರ ಹುಟುಕಾಡ ನಡೆಸುತ್ತಿವೆ. ಪರಿಸ್ಥಿತಿ ತೀರ ಗಂಭೀರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *