ಹೊಸ ಕ್ರಿಕೆಟ್ ಸರಣಿ: ಭಾರತ ‘ಎ’ ಹಾಗೂ ಶೇಷ ಭಾರತ ತಂಡಗಳ ಪ್ರಕಟ; ಯಾವ ಆಟಗಾರರು ಆಯ್ಕೆಯಾಗಿದ್ದಾರೆ?

ಭಾರತ ಎ ಮತ್ತು ಆಸ್ಟ್ರೇಲಿಯಾ ಎ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ಸೆಪ್ಟೆಂಬರ್ 30 ರಿಂದ ಶುರುವಾಗಲಿದೆ. ಕಾನ್ಪುರದಲ್ಲಿ ನಡೆಯಲಿರುವ ಈ ಸರಣಿಗಾಗಿ 15 ಸದಸ್ಯರುಗಳ ಭಾರತ ಎ ತಂಡಗಳನ್ನು ಘೋಷಿಸಲಾಗಿದೆ. ಈ ತಂಡದಲ್ಲಿ ಟೀಮ್ ಇಂಡಿಯಾ ಸ್ಟಾರ್ ಆಟಗಾರರು ಕಾಣಿಸಿಕೊಂಡಿರುವುದು ವಿಶೇಷ.

ಆಸ್ಟ್ರೇಲಿಯಾ ಎ ತಂಡದ ವಿರುದ್ಧದ ಏಕದಿನ ಸರಣಿಗಾಗಿ ಭಾರತ ಎ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ. ಸೆಪ್ಟೆಂಬರ್ 30 ರಿಂದ ಶುರುವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಭಾರತ ಟಿ20 ತಂಡದ ಭಾಗವಾಗಿರುವ ತಿಲಕ್ ವರ್ಮಾ, ಅಭಿಷೇಕ್ ಶರ್ಮಾ, ಹರ್ಷಿತ್ ರಾಣಾ ಹಾಗೂ ಅಷರ್ದೀಪ್ ಸಿಂಗ್ ಅಲಭ್ಯರಾಗಿದ್ದು, ದ್ವಿತೀಯ ಪಂದ್ಯದ ವೇಳೆ ಭಾರತ ಎ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಅದರಂತೆ ಆಸ್ಟ್ರೇಲಿಯಾ ಎ ವಿರುದ್ಧದ ಏಕದಿನ ಸರಣಿಗೆ ಭಾರತ ಎ ತಂಡ ಈ ಕೆಳಗಿನಂತಿದೆ…
ಭಾರತ ಎ ತಂಡ (ಮೊದಲ ಪಂದ್ಯಕ್ಕೆ): ಶ್ರೇಯಸ್ ಅಯ್ಯರ್ (ನಾಯಕ), ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ಆಯುಷ್ ಬದೋನಿ, ಸೂರ್ಯಾಂಶ್ ಶೆಡ್ಗೆ, ವಿಪ್ರಜ್ ನಿಗಮ್, ನಿಶಾಂತ್ ಸಿಂಧು, ಗುರ್ಜಪ್ನೀತ್ ಸಿಂಗ್, ಯುಧ್ವಿರ್ ಸಿಂಗ್, ರವಿ ಬಿಷ್ಣೋಯ್, ಅಭಿಷೇಕ್ ಸಿಂಗ್ ಪೊರೆಲ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯ, ಸಿಮರ್ಜಿತ್ ಸಿಂಗ್.
ಭಾರತ ಎ ತಂಡ (2ನೇ ಮತ್ತು 3ನೇ ಪಂದ್ಯಗಳಿಗೆ): ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಪ್ರಭ್ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ಆಯುಷ್ ಬದೋನಿ, ಸೂರ್ಯಾಂಶ್ ಶೆಡ್ಗೆ, ವಿಪ್ರಜ್ ನಿಗಮ್, ನಿಶಾಂತ್ ಸಿಂಧು, ಗುರ್ಜಪ್ನೀತ್ ಸಿಂಗ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಯಧ್ವೀರ್ ಸಿಂಗ್, ರವಿ ಬಿಷ್ಣೋಯ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್).
ಇರಾನಿ ಕಪ್ಗೆ ಶೇಷ ಭಾರತ ತಂಡ ಪ್ರಕಟ:
ಮುಂಬರುವ ಇರಾನಿ ಕಪ್ಗೆ ರೆಸ್ಟ್ ಆಫ್ ಇಂಡಿಯಾ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸಲಿದ್ದು, ಉಪನಾಯಕನಾಗಿ ರುತುರಾಜ್ ಗಾಯಕ್ವಾಡ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಲ್ಲಿ ಸ್ಥಾನ ಪಡೆದಿರುವ ಸಂಪೂರ್ಣ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…
ಶೇಷ ಭಾರತ ತಂಡ: ರಜತ್ ಪಾಟಿದಾರ್ (ನಾಯಕ), ಅಭಿಮನ್ಯು ಈಶ್ವರನ್, ಆರ್ಯನ್ ಜುಯಲ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ಉಪನಾಯಕ), ಯಶ್ ಧುಲ್, ಶೇಖ್ ರಶೀದ್, ಇಶಾನ್ ಕಿಶನ್ (ವಿಕೆಟ್ ಕೀಪರ್), ತನುಷ್ ಕೋಟ್ಯಾನ್, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಖಲೀಲ್ ಅಹ್ಮದ್, ಆಕಾಶ್ ದೀಪ್, ಅನ್ಶುಲ್ ಕಂಬೋಜ್, ಸರನ್ಶ್ ಜೈನ್.
ಏನಿದು ಇರಾನಿ ಟ್ರೋಫಿ?
ಇರಾನಿ ಕಪ್ ಎಂಬುದು ದೇಶೀಯ ಅಂಗಳದ ಏಕೈಕ ಟೆಸ್ಟ್ ಪಂದ್ಯ. ಇಲ್ಲಿ ಹಾಲಿ ರಣಜಿ ಚಾಂಪಿಯನ್ ತಂಡ ಹಾಗೂ ಶೇಷ ಭಾರತ ತಂಡ ಒಂದು ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಅಂದರೆ ಇಲ್ಲಿ ಶೇಷ ಭಾರತ ತಂಡದಲ್ಲಿ ರಣಜಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಬಿಸಿಸಿಐ ಆಯ್ಕೆ ಮಾಡುತ್ತದೆ. ಅದರಂತೆ ಅಕ್ಟೋಬರ್ 1 ರಿಂದ ಆರಂಭವಾಗಲಿರುವ ಇರಾನಿ ಕಪ್ ಪಂದ್ಯದಲ್ಲಿ ಹಾಲಿ ರಣಜಿ ಚಾಂಪಿಯನ್ ವಿದರ್ಭ ಹಾಗೂ ಶೇಷ ಭಾರತ ತಂಡ ಮುಖಾಮುಖಿಯಾಗಲಿದೆ.
