Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹೊಸದಿಲ್ಲಿ: ‘ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಡಿ’; ಕೇಂದ್ರಕ್ಕೆ ತಮಿಳುನಾಡು ಸಿಎಂ ವಿಜಯ್ ಅಧಿಕೃತ ಒತ್ತಾಯ!

Spread the love

ಹೊಸದಿಲ್ಲಿ: ಕರ್ನಾಟಕದ ಮೇಕೆದಾಟು ಯೋಜನೆಗೆ ಅನುಮತಿ ನೀಡದಂತೆ ಕೇಂದ್ರ ಸರಕಾರಕ್ಕೆ ತಮಿಳುನಾಡು ಸಿಎಂ ವಿಜಯ್ ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿ ಈ ಕುರಿತು ನಿರ್ಣಯವನ್ನು ಮಂಡಿಸಿದ್ದಾರೆ.
ಮೇಕೆದಾಟು ಬಳಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಕ್ರಮದ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಶುಕ್ರವಾರ ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಈ ನಿರ್ಣಯದಲ್ಲಿ ಮೇಕೆದಾಟು ಯೋಜನೆಗೆ ಕೇಂದ್ರ ಸರಕಾರ ತಾಂತ್ರಿಕ ಹಾಗೂ ಪರಿಸರ ಅನುಮೋದನೆ ನೀಡಬಾರದು ಎಂದು ಒತ್ತಾಯಿಸಲಾಗಿದೆ.

ಕರ್ನಾಟಕ ಸರಕಾರ ಈ ಯೋಜನೆಯನ್ನು “ಏಕಪಕ್ಷೀಯವಾಗಿ” ಜಾರಿಗೊಳಿಸಲು ಪ್ರಯತ್ನಿಸುತ್ತಿದೆ ಎಂದು ನಿರ್ಣಯದಲ್ಲಿ ಆರೋಪಿಸಲಾಗಿದ್ದು, ಯೋಜನೆಗೆ ಸಂಬಂಧಿಸಿ ಇತರ ರಾಜ್ಯಗಳ ಒಪ್ಪಿಗೆಯನ್ನು ಪಡೆಯುವುದು ಅಗತ್ಯ ಎಂದು ಹೇಳಲಾಗಿದೆ.
ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡಲಾಗಿ ಸಮತೋಲನ ಜಲಾಶಯ ನಿರ್ಮಿಸಲು ಕರ್ನಾಟಕ ಮುಂದಾಗಿರುವುದಕ್ಕೆ ತಮಿಳುನಾಡು ದೀರ್ಘಕಾಲದಿಂದ ವಿರೋಧ ವ್ಯಕ್ತಪಡಿಸುತ್ತಿದೆ. ಈ ಯೋಜನೆ ಜಾರಿಯಾದರೆ ರಾಜ್ಯದ ಹಿತಾಸಕ್ತಿಗಳಿಗೆ ಧಕ್ಕೆ ಉಂಟಾಗುತ್ತದೆ ಎಂಬುದು ತಮಿಳುನಾಡಿನ ವಾದವಾಗಿದೆ.


Spread the love
Share:

administrator

Leave a Reply

Your email address will not be published. Required fields are marked *