Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹೊಸದಿಲ್ಲಿ: ಎನ್‌ಸಿಆರ್ ಪ್ರದೇಶದಲ್ಲಿ ಭಾರಿ ಮಳೆ ಹಾಗೂ ಗಾಳಿ;ವಿಮಾನಗಳ ಮಾರ್ಗ ಬದಲಾವಣೆ

Spread the love

ಹೊಸದಿಲ್ಲಿ: ದಿಲ್ಲಿ ಮತ್ತು ಎನ್‌ಸಿಆ‌ರ್ ಪ್ರದೇಶಗಳಲ್ಲಿ ಸೋಮವಾರ ಭಾರಿ ಮಳೆ ಹಾಗೂ ಗಾಳಿ ಬೀಸಿದ ಪರಿಣಾಮ ಒಟ್ಟು 15 ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ. ದಿಲ್ಲಿ, ನೋಯ್ದಾ ಮತ್ತು ಗಾಝಿಯಾಬಾದ್‌ನಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿದ್ದು, ಹಲವು ರಸ್ತೆಗಳು ಜಲಾವೃತಗೊಂಡಿದೆ.
ಉತ್ತರ ಭಾರತ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ನೋಯ್ಯಾ ಗಾಝಿಯಾಬಾದ್, ಗುರುಗ್ರಾಮ ಮತ್ತು ಫರಿದಾಬಾದ್‌ನಲ್ಲಿ ಭಾರಿ ಮಳೆಯಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆಗೆ ತೀವ್ರ ಅಡ್ಡಿಯುಂಟಾಗಿದೆ.
ಮೂಲಗಳ ಪ್ರಕಾರ, 3 ಅಂತಾರಾಷ್ಟ್ರೀಯ ವಿಮಾನಗಳು ಸೇರಿದಂತೆ ಒಟ್ಟು 15 ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ. ಈ ಪೈಕಿ 12 ವಿಮಾನಗಳನ್ನು ಜೈಪುರಕ್ಕೆ 2 ವಿಮಾನಗಳನ್ನು ಚಂಡಿಗಢಕ್ಕೆ ಹಾಗೂ ಒಂದು ವಿಮಾನವನ್ನು ಲಕ್ಕೋಗೆ ಕಳುಹಿಸಲಾಗಿದೆ. ಮಳೆಯಿಂದಾಗಿ ರಾಜಧಾನಿಯ ಹಲವು ಕಡೆಗಳಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ.


Spread the love
Share:

administrator

Leave a Reply

Your email address will not be published. Required fields are marked *