Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

“ಹೊಸದಿಲ್ಲಿ: ಗೋವಿಂದಪುರಿಯ 5 ಅಂತಸ್ತಿನ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ; ಮೂವರ ಸಾ*ವು, ಇಬ್ಬರು ಗಂಭೀರ!”

Spread the love

ಹೊಸದಿಲ್ಲಿ: ಆಗ್ನೆಯ ದಿಲ್ಲಿಯ ಗೋವಿಂದಪುರಿ ಪ್ರದೇಶದಲ್ಲಿರುವ ಐದು ಅಂತಸ್ತಿನ ವಸತಿ ಕಟ್ಟಡದಲ್ಲಿ ಶುಕ್ರವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತುಘಲಕಾಬಾದ್ ಎಕ್ಸೆನ್ಸನ್ ನಲ್ಲಿರುವ ಈ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಬೆಳಗಿನ ಜಾವ 2.24ರ ಸುಮಾರಿಗೆ ಗೋವಿಂದಪುರಿ ಪೊಲೀಸ್ ಠಾಣೆಗೆ ಪಿಸಿಆರ್ ಕರೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಕಿ ಹೊತ್ತಿಕೊಂಡ ಬಳಿಕ ಕಟ್ಟಡದೊಳಗೆ ದಟ್ಟ ಹೊಗೆ ಆವರಿಸಿದ್ದರಿಂದ ಹಲವಾರು ನಿವಾಸಿಗಳು ಹೊರಬರಲು ಸಾಧ್ಯವಾಗದೆ ಒಳಗೇ ಸಿಲುಕಿಕೊಂಡಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಕಾರ್ಯಾಚರಣೆಯಲ್ಲಿ ಎಂಟು ಮಂದಿಯನ್ನು ಕಟ್ಟಡದಿಂದ ಸುರಕ್ಷಿತವಾಗಿ ಹೊರತೆಗೆದು ಸಫರ್ಜಂ ಆಸ್ಪತ್ರೆ ಹಾಗೂ ಏಮ್ಸ್ ಟ್ರಾಮಾ ಸೆಂಟರ್ ಗೆ ದಾಖಲಿಸಲಾಯಿತು ಎಂದು ಆಗ್ನೆಯ ವಿಭಾಗದ ಉಪ ಪೊಲೀಸ್ ಆಯುಕ್ತ ಹೇಮಂತ್ ತಿವಾರಿ ತಿಳಿಸಿದ್ದಾರೆ.
ಆಸ್ಪತ್ರೆಗೆ ದಾಖಲಿಸಲಾದವರ ಪೈಕಿ 22 ವರ್ಷದ ಯುವಕ ಹಾಗೂ ಇಬ್ಬರು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ಕಟ್ಟಡದ ನೆಲ ಮಹಡಿಯಲ್ಲಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿ ಅವಘಡದ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.
ದಕ್ಷಿಣ ದಿಲ್ಲಿಯ ಮಾಳವೀಯ ನಗರದಲ್ಲಿನ ಹೋಟೆಲ್ ನಲ್ಲಿ ಸಂಭವಿಸಿದ್ದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 21 ಮಂದಿ ಮೃತಪಟ್ಟ ಘಟನೆ ನಡೆದ ಒಂದು ವಾರದ ಬಳಿಕ ಈ ದುರ್ಘಟನೆ ಸಂಭವಿಸಿದೆ.


Spread the love
Share:

administrator

Leave a Reply

Your email address will not be published. Required fields are marked *