Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿ: ಅಗತ್ಯವಿದ್ದ ಕಡೆ ಉಪಕೇಂದ್ರ ತೆರೆದು ಪಡಿತರ ಹಂಚಿಕೆಗೆ ಕ್ರಮ – ಸಚಿವ ಮುನಿಯಪ್ಪ

Spread the love

ಬೆಳಗಾವಿ: ಹೊಸ ನ್ಯಾಯಬೆಲೆ ಅಂಗಡಿಗೆ ಮಂಜೂರಾತಿ ಅವಕಾಶ ಕಲ್ಪಿಸಲಾಗಿದ್ದು, ಅಗತ್ಯಾನುಸಾರ ಗ್ರಾಮಗಳಲ್ಲಿ ಉಪಕೇಂದ್ರ ತೆರೆದು ಆಹಾರ ಧಾನ್ಯ ಹಂಚಿಕೆಗೆ ಕ್ರಮವಹಿಸುವುಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಸಚಿವ ಕೆ.ಹೆಚ್.ಮುನಿಯಪ್ಪ  (KH Muniyappa) ತಿಳಿಸಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ಗುರುಮಿಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ 2016 ಕಲಂ(6)ರಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮವಹಿಸಲಾಗುತ್ತಿದೆ. ಸಣ್ಣ ಸಣ್ಣ ಗ್ರಾಮದ ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಗ್ರಾಮಗಳಲ್ಲಿ ಉಪಕೇಂದ್ರಗಳನ್ನು ತೆರೆದು ಆಹಾರ ಧಾನ್ಯ ಹಂಚಿಕೆ ಮಾಡಲು ಕ್ರಮವಹಿಸಲಾಗುವುದು. ಪಡಿತರ ಚೀಟಿಗಳ ಸಂಖ್ಯಾನುಸಾರ ಅಗತ್ಯವಿದ್ದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಕ್ರಮ ವಹಿಸಲಾಗುವುದು ಎಂದು ಹೇಳಿದರು

ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಗಳ ಸಮುದಾಯಗಳ ಜನಸಂಖ್ಯೆಯು 40%ಕ್ಕಿಂತ ಹೆಚ್ಚಿರುವ ಪ್ರದೇಶದಲ್ಲಿ ಆದ್ಯತೆಯ ಮೇಲೆ ಹೊಸ ನ್ಯಾಯಬೆಲೆ ಅಂಗಡಿಗಳು ಮತ್ತು ನವೀಕರಿಸಿದ ನ್ಯಾಯಬೆಲೆ ಅಂಗಡಿಗಳನ್ನು ಆ ಸಮುದಾಯದವರಿಗೆ ನೀಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದರು.

ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಸಮುದಾಯದ ಸಂಘ ಸಂಸ್ಥೆಗಳಿಗೆ/ಸಮುದಾಯದ ಖಾಸಗಿ ವ್ಯಕ್ತಿಗಳಿಗೆ ಮೀಸಲಾತಿಯನ್ನು ಅನುಸರಿಸಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಆದ್ಯತೆ ನೀಡಲಾಗುವುದು. ಈ ಬಗ್ಗೆ ಜಿಲ್ಲಾಮಟ್ಟದ ಸಮಿತಿಯನ್ನು ರಚಿಸಿ ಮಾರ್ಗಸೂಚಿಗಳನ್ನು ಸಹ ಹೊರಡಿಸಲಾಗಿದೆ. ಸರ್ಕಾರದ ಆದೇಶದಂತೆ 75 ವಯಸ್ಸಿನ ಮೇಲ್ಪಟ್ಟ ಒಂಟಿ ಹಿರಿಯ ನಾಗರೀಕರು ಮಾತ್ರ ಇರುವ ಮನೆಗಳಿಗೆ ಅನ್ನಸುವಿಧಾ ಮಾಡ್ಯುಲ್ ಮೂಲಕ ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ಪಡಿತರ ವಿತರಣೆ ಕಾರ್ಯವನ್ನು ಅನುಷ್ಠಾನಗೊಳಿಸಲಾಗಿರುತ್ತದೆ ಎಂದು ವಿವರಿಸಿದರು.


Spread the love
Share:

administrator

Leave a Reply

Your email address will not be published. Required fields are marked *