Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶಿಮ್ಜಿತಾ ಮುಸ್ತಫಾಗೆ ಸಿಗದ ಜಾಮೀನು: ಇನ್ನಷ್ಟು ದಿನ ಜೈಲಿನಲ್ಲೇ ಇರಲಿರುವ ಆರೋಪಿ.

Spread the love

ಕೊಚ್ಚಿ: ಕೇರಳ ಮೂಲದ ದೀಪಕ್ ಸಾವು ಪ್ರಕರಣ ( Deepak death Case ) ಇಡೀ ದೇಶದಲ್ಲಿ ಸಾಕಷ್ಟು ಸದ್ದು ಮಾಡಿದ್ದು ನಿಮಗೆಲ್ಲರಿಗೂ ಗೊತ್ತಿದೆ. ತಾನು ಮಾಡದ ತಪ್ಪಿಗೆ ಅಮಾಯಕ ದೀಪಕ್ ಸಾವಿಗೆ ಶರಣಾದನು. ತನ್ನ ವೀವ್ಸ್ ಹುಚ್ಚಿಗೆ ಮಾನವೀಯತೆಯನ್ನು ಮರೆತು ವರ್ತಿಸಿದ ಆರೋಪಿ ಶಿಮ್ಜಿತಾ ಮುಸ್ತಫಾ ವಿರುದ್ಧ ದೇಶಾದ್ಯಂತ ತೀವ್ರ ಟೀಕೆಗಳು ವ್ಯಕ್ತವಾಯಿತು.

ಇದೀಗ ಶಿಮ್ಜಿತಾಗೆ ನ್ಯಾಯಾಲಯದಲ್ಲೂ ತೀವ್ರ ಹಿನ್ನಡೆ ಉಂಟಾಗಿದೆ.
ಪ್ರಸ್ತುತ ನ್ಯಾಯಾಂಗದ ಬಂಧನದಲ್ಲಿರುವ ಆರೋಪಿ ಶಿಮ್ಜಿತಾ, ಇನ್ನಷ್ಟು ದಿನಗಳ ಕಾಲ ಜೈಲಿನ ಕೋಣೆಯಲ್ಲಿ ಕಾಲ ಕಳೆಯಬೇಕಾಗಿದೆ. ಏಕೆಂದರೆ, ಕುಂದಮಂಗಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆಕೆಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.


ನ್ಯಾಯಾಲಯವು ಪ್ರಾಸಿಕ್ಯೂಷನ್ ವಾದಗಳನ್ನು ಎತ್ತಿಹಿಡಿದಿದೆ. ಸದ್ಯ ಈ ಪ್ರಕರಣ, ತನಿಖೆಯ ಪ್ರಾಥಮಿಕ ಹಂತದಲ್ಲಿದೆ ಮತ್ತು ಈ ಪರಿಸ್ಥಿತಿಯಲ್ಲಿ ಜಾಮೀನು ನೀಡುವುದು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಪ್ರಾಸಿಕ್ಯೂಷನ್ ವಾದಿಸಿತು. ಬಸ್ ಸಿಬ್ಬಂದಿ ಮತ್ತು ಇತರ ಪ್ರಯಾಣಿಕರ ಹೇಳಿಕೆಗಳನ್ನು ದಾಖಲಿಸಬೇಕಾಗಿರುವುದರಿಂದ ಆರೋಪಿಗಳನ್ನು ಬಿಡುಗಡೆ ಮಾಡುವುದು ತನಿಖೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಪೊಲೀಸ್ ವರದಿಯಲ್ಲಿ ಸೂಚಿಸಲಾಗಿತ್ತು. ಇದನ್ನು ಪರಿಗಣಿಸಿದ ನ್ಯಾಯಾಲಯ ಜಾಮೀನು ತಿರಸ್ಕರಿಸಿದೆ.
ಏನಿದು ಪ್ರಕರಣ?

ಇತ್ತೀಚೆಗೆ, ಸಾಮಾಜಿಕ ಜಾಲತಾಣದಲ್ಲಿ ಆರೋಪಿ ಶಿಮ್ಜಿತಾ, ತನಗೆ ಬಸ್ಸಿನಲ್ಲಿ ವ್ಯಕ್ತಿಯೊಬ್ಬ ಅಸಭ್ಯಕರವಾಗಿ ಮುಟ್ಟುತ್ತಿದ್ದಾನೆ ಎಂದು ವಿಡಿಯೋ ಮಾಡಿ, ಸುಳ್ಳು ಸಂದೇಶವನ್ನು ಸಾರಿದಳು. ಈ ವಿಡಿಯೋ ಜಾಲತಾಣಗಳಲ್ಲಿ ಕ್ಷಣಮಾತ್ರದಲ್ಲಿ ವೈರಲ್ ಆಗಿ, ವ್ಯಕ್ತಿಗೆ ಅಲ್ಲೇ ಹಿಗ್ಗಾಮುಗ್ಗಾ ಥಳಿಸಬೇಕಿತ್ತು ಎಂಬ ಕಮೆಂಟ್ಗಳಿಂದ ತುಂಬಿತು. ಸಾಕಷ್ಟು ಜನರು, ಆತನಿಗೆ ಸರಿಯಾಗಿ ಬುದ್ಧಿ ಕಲಿಸಬೇಕಿತ್ತು ಎಂದೆಲ್ಲ ಆಕ್ರೋಶ ಹೊರಹಾಕಿದರು. ತನ್ನದೇನು ತಪ್ಪಿಲ್ಲದಿದ್ದರೂ ಸುಖಾಸುಮ್ಮನೆ ನನ್ನನ್ನು ವಿಡಿಯೋದಲ್ಲಿ ತೋರಿಸಿ, ಮಾನ-ಮರ್ಯಾದೆ ಕಳೆದಳು ಎಂದು ದೀಪಕ್, ಮನನೊಂದು ಆತ್ಮಹತ್ಯೆಗೆ ಶರಣಾದರು. ಈ ಘಟನೆ ಇಡೀ ದೇಶದಲ್ಲಿ ಭಾರೀ ಚರ್ಚೆಗೆ ಗ್ರಾಸವಾಯಿತು.


Spread the love
Share:

administrator

Leave a Reply

Your email address will not be published. Required fields are marked *