Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸೂಲಿಬೆಲೆ ಕಾರ್ಯಕ್ರಮಕ್ಕೆ ಪೊಲೀಸರಿಂದ ನೋಟೀಸ್

Spread the love

ಕುಂದಾಪುರ: ಕುಂದಾಪುರದ ಮೊಗವೀರ ಸಭಾಭವನದಲ್ಲಿ ಜೂನ್ 20ರಿಂದ ಜೂನ್ 22ರವರೆಗೆ ಹಮ್ಮಿಕೊಳ್ಳಲಾದ ‘ಇನ್ನಿಗ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ’ ಎಂಬ ವಿಷಯದ ಕುರಿತ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ಕಾರ್ಯಕ್ರಮ ಆಯೋಜಕರಿಗೆ ಕುಂದಾಪುರ ಪೊಲೀಸ್ ಠಾಣೆಯಿಂದ ನೋಟಿಸ್ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ರಾಜಕೀಯ ವಿಚಾರ ಮಾತನಾಡಬಾರದು ಎಂದು ಸೂಚನೆ ನೀಡಲಾಗಿದ್ದು, ಈ ವಿಚಾರಕ್ಕೆ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಂದಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆಯವರಿಂದ `ಇನ್ನೀಗ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ’ ಎಂಬ ವಿಚಾರವಾಗಿ ಜೂ.20, 21 ಮತ್ತು 22 ರಂದು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಅನುಮತಿ ನೀಡಿರುವ ಪೊಲೀಸರು, ರಾಜಕೀಯ ಮಾತನಾಡಬಾರದು ಹಾಗೂ ಯಾವುದೇ ನಾಯಕರ ತೇಜೋವಧೆ ಮಾಡಬಾರದು ಎಂದು ಆಯೋಜಕರಿಗೆ ಹಾಗೂ ಸುಲಿಬೆಲೆಯವರಿಗೆ ನೋಟಿಸ್ ನೀಡಿದ್ದಾರೆ. ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಹಿತಿಯನ್ನು ನೀಡಬೇಕು. ಕಾರ್ಯಕ್ರಮ ದಲ್ಲಿ ಭಾಗಿಯಾಗುವ ಗಣ್ಯರ ಬಗ್ಗೆ ಮತ್ತು ವೇದಿಕೆ ಹಂಚಿಕೊಳ್ಳುವವರ ವಿವರವನ್ನು ನೀಡಬೇಕು.

ಉಪನ್ಯಾಸ ನೀಡುವಾಗ ಅನ್ಯ ಧರ್ಮಗಳ ಬಗ್ಗೆ ನೋವಾಗುವ ರೀತಿಯಲ್ಲಿ ಅಥವಾ ದಕ್ಕೆ ಉಂಟಾಗ ದಂತೆ ಉಪನ್ಯಾಸ ನೀಡದಂತೆ ಎಚ್ಚರಿಕೆ ವಹಿಸಬೇಕು. ಉಪನ್ಯಾಸದ ವಿಷಯಕ್ಕೆ ಸಂಬಂಧಪಟ್ಟಂತೆ ಅದರ ವ್ಯಾಪ್ತಿಯಲ್ಲಿ ಮಾತ್ರ ಉಪನ್ಯಾಸ ನೀಡುವುದು ಹೊರತು ಬೇರೆ ರಾಜಕೀಯ ವಿಚಾರವಾಗಿ ಅಥವಾ ರಾಜಕೀಯ ನಾಯಕರ ತೇಜೋವಧೆ ಮಾಡದಂತೆ ನಿಗಾವಹಿಸಬೇಕು. ಕಾರ್ಯಕ್ರಮವನ್ನು ನಿಗದಿತ ಅವಧಿಯಲ್ಲಿ ಪ್ರಾರಂಭಿಸಿ ನಿಗದಿಪಡಿಸದ ಅವಧಿಯೊಳಗೆ ಕಡ್ಡಾಯವಾಗಿ ಮುಕ್ತಾಯಗೊಳಿಸಬೇಕು ಎಂದು ನೊಟೀಸ್ ನಲ್ಲಿ ತಿಳಿಸಲಾಗಿದೆ.

ಇದೀಗ ನೋಟಿಸ್ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಸೂಲಿಬೆಲೆ ಇದು ನನ್ನನ್ನು ಅಘೋಷಿತ ಗಡಿಪಾರು ಮಾಡಿಸುವ ಪ್ರಯತ್ನವಾಗಿದೆ. ನನಗೆ ನೋಟಿಸ್ ಹೊಸತಲ್ಲ, ಬಹಳ ಕಡೆಗಳಲ್ಲಿ ನೋಟಿಸ್ ಕೊಟ್ಟಿದ್ದಾರೆ. ಈ ಬಾರಿ ರಾಜಕೀಯ ಮಾತನಾಡಬಾರದು, ಯಾವುದೇ ನಾಯಕರ ತೇಜೋವಧೆ ಮಾಡಬಾರದು ಎಂದಿದ್ದಾರೆ. ನೆಹರು, ಇಂದಿರಾ, ರಾಜೀವ್ ಕುರಿತಂತೆ ಮಾತನಾಡಬಾರದು ಎಂದು ಅರ್ಥವೇ? ಘಜ್ನಿ, ಘೋರಿ, ಔರಂಗಜೇಬ್ ಮುಂತಾದ ಕ್ರೂರಿಗಳ ತೇಜೋವಧೆ ಮಾಡಬಾರದೆಂದು ಅರ್ಥವೇ? ಕರ್ನಾಟಕದಲ್ಲಿ ರಾಜಕೀಯ ಮಾತನಾಡಬಾರದು ಎನ್ನುವುದು ಎಂದಿನಿಂದ ಜಾರಿಯಾಯಿತು? ಕುಂದಾಪುರ ಪೊಲೀಸರೇ ಮಾಹಿತಿ ಕೊಟ್ಟರೆ ಉತ್ತಮ. ನಾನು ಕುಂದಾಪುರಕ್ಕೆ ಬರಬಾರದೆಂದು ಹೇಳುವವರು ದಯವಿಟ್ಟು ಕಾರ್ಯಕ್ರಮಕ್ಕೆ ಬನ್ನಿ ಎಂದಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *