Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಶ್ಲೀಲ ಮೆಸೇಜ್ ಆರೋಪ: ಮೂವರು ಬಾಲಕರನ್ನು ಧ್ವಜಕಂಬಕ್ಕೆ ಕಟ್ಟಿ ಥಳಿಸಿದ ಘಟನೆ – 55 ಜನರ ವಿರುದ್ಧ ದೂರು

Spread the love

ನರಗುಂದ (ಗದಗ ಜಿಲ್ಲೆ): ಬಾಲಕಿಯರ ಮೊಬೈಲ್‌ಗೆ ಅಶ್ಲೀಲ ಸಂದೇಶ ಕಳಿಸಿದ್ದಾರೆ ಎಂದು ಆರೋಪಿಸಿ ಮೂವರು ಬಾಲಕರನ್ನು ಬನಹಟ್ಟಿ ಗ್ರಾಮ ಪಂಚಾಯಿತಿ ಕಚೇರಿ ಎದುರಿನ ಧ್ವಜ ಕಂಬಕ್ಕೆ ಕಟ್ಟಿ ಥಳಿಸಲಾಗಿದ್ದು ನರಗುಂದ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು, ಪ್ರತಿದೂರು ದಾಖಲಾಗಿದೆ.

ಮೇ 28 ರಂದು ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಾಲಕರನ್ನು ಥಳಿಸಿದವರ ವಿರುದ್ದ ಮಾಯಪ್ಪ ಕೊಳ್ಳಪ್ಪನವರ ಎಂಬುವವರು 55 ಜನರ ಮೇಲೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, 55 ಜನರ ಪೈಕಿ 10 ಜನರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ನರಗುಂದ ಸಿಪಿಐ ಮಂಜುನಾಥ್ ನಡುವಿನಮನಿ ತಿಳಿಸಿದರು.

‘ಜೊತೆಗೆ, ಬಾಲಕಿಯರ ಮೊಬೈಲ್‌ಗೆ ಅಶ್ಲೀಲ ಮೆಸೇಜ್ ಕಳಿಸಿದವರ ವಿರುದ್ಧವೂ ಸಿದ್ದಪ್ಪ ಕುರಿ ಎಂಬುವರು ಪ್ರತಿದೂರು ದಾಖಲಿಸಿದ್ದಾರೆ. ಸಂದೇಶ ಕಳಿಸಿದವರ ಪೈಕಿ ಥಳಿತಕ್ಕೊಳಗಾಗಿ ಗಾಯಗೊಂಡ ಒಬ್ಬ ಬಾಲಕ ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನಿಬ್ಬರು ನಾಪತ್ತೆಯಾಗಿದ್ದು, ಅವರ ಪತ್ತೆಗೆ ಕ್ರಮವಹಿಸಲಾಗಿದೆ’ ಎಂದರು.

‘ಈ ಎರಡೂ ದೂರುಗಳನ್ನು ದೌರ್ಜನ್ಯ ಮತ್ತು ಪೋಕ್ಸೊ ಕಾಯ್ದೆಯಡಿ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

ಘಟನೆ ವಿವರ ಪಡೆದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಬನಹಟ್ಟಿ ಗ್ರಾಮಕ್ಕೆ ಭಾನುವಾರ ಭೇಟಿ ನೀಡಿದರು. ಬನಹಟ್ಟಿಯಲ್ಲಿ ಭದ್ರತೆಗಾಗಿ ಡಿಎಸ್‌ಪಿ, ಸಿಪಿಐ, ಪಿಎಸ್‌ಐ ಸೇರಿದಂತೆ ಮೀಸಲು ಪಡೆ, ಸಿವಿಲ್ ಪೊಲೀಸರನ್ನು ನಿಯೋಜಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *