ನಂದಿಧ್ವಜ ಪೂಜೆ ವೇಳೆ ಸಚಿವರಿಗೆ ಅಡ್ಡಗಾಲು: ತನಿಖೆಗೆ ಆದೇಶಿಸಿದ ಸಿಎಂ ಡಿ.ಕೆ. ಶಿವಕುಮಾರ್!

ಬೆಂಗಳೂರು/ಮೈಸೂರು: ನಂದಿಧ್ವಜ ಪೂಜೆ ವೇಳೆ ಸಿಎಂ ಜೊತೆ ಸಚಿವರನ್ನ ಬಿಡದೇ ಎಸ್ಪಿ ಅಡ್ಡಗಟ್ಟಿದ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ, ವರದಿ ನೀಡುವಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (CM DK Shivakumar) ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajaneesh) ಅವರಿಗೆ ಸೂಚನೆ ನೀಡಿದ್ದಾರೆ.
ಮೈಸೂರು ಅರಮನೆ ಆವರಣದಲ್ಲಿ ನಿನ್ನೆ (ಅ.21) ನಡೆದ ನಂದಿಧ್ವಜ ಪೂಜೆ ಸಂದರ್ಭದಲ್ಲಿ ಸಚಿವರಾದ ಬಾಲಕೃಷ್ಣ, ನರೇಂದ್ರ ಸ್ವಾಮಿ, ಬಸವಂತಪ್ಪ ಅವರನ್ನು ಪೂಜೆ ಆವರಣ ಪ್ರವೇಶಿಸಲು ಪೊಲೀಸ್ ಅಧಿಕಾರಿಗಳು ನಿರ್ಬಂಧಿಸಿದ್ದರು. ಈ ಸಂಬಂಧ ಇದೀಗ ಸಿಎಂ ಅವರು ವಿಚಾರಣೆ ನಡೆಸುವಂತೆ ಸೂಚಿಸಿದ್ದಾರೆಈ ಸಂಬಂಧ ಸಿಎಂ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮಂತ್ರಿಗಳನ್ನೇ ನಿರ್ಬಂಧಿಸುವ ಮೂಲಕ ಅಧಿಕಾರಿಗಳು ಉದ್ಧಟತನದಿಂದ ವರ್ತಿಸಿರುವುದು ಕಂಡು ಬಂದಿದೆ. ತಕ್ಷಣ ಖುದ್ದು ನಾನೇ ಮಧ್ಯಪ್ರವೇಶಿಸಿ ಮಂತ್ರಿಗಳ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದ್ದೇನೆ. ಆದರೂ ಅಧಿಕಾರಿಗಳ ಉಡಾಫೆ ಸಹಿಸಲು ಆಗುವುದಿಲ್ಲ. ಹೀಗಾಗಿ ಇದಕ್ಕೆ ಹೊಣೆಗಾರರು ಯಾರು ಎಂಬ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.
ವರದಿ ಬಂದ ನಂತರ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
