Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಕ್ಟೋಬರ್ 7 ವಿಶ್ವ ಹತ್ತಿ ದಿನ: ರೈತರ ಪಾಲಿನ ‘ಬಿಳಿ ಬಂಗಾರ’ ಹತ್ತಿಯ ಮಹತ್ವ ಮತ್ತು ಆಚರಣೆಯ ಉದ್ದೇಶಗಳೇನು?

Spread the love

ಹತ್ತಿ ಒಂದು ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಜವಳಿ, ಪಶು ಆಹಾರ ಸೇರಿದಂತೆ ಹಲವು ಉದ್ಯಮಗಳಲ್ಲಿ ಇದನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ. ಆದರೆ ಇಂದು ಹತ್ತಿ ಉತ್ಪಾದನೆ ಕುಂಠಿತವಾಗಿದ್ದು, ಈ ನಿಟ್ಟಿನಲ್ಲಿ ಹತ್ತಿ ಬೆಳೆ ಉತ್ಪಾದನೆಯನ್ನು ಉತ್ತೇಜಿಸುವ, ಹತ್ತಿ ಕೃಷಿ ಮತ್ತು ಅದರಲ್ಲಿ ತೊಡಗಿರುವ ಸಮುದಾಯಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಅಕ್ಟೋಬರ್‌ 7 ರಂದು ವಿಶ್ವ ಹತ್ತಿ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ.

ರೈತರ ಪಾಲಿನ ಬಿಳಿ ಬಂಗಾರ ಅಂತಾನೇ ಹೆಸರುವಾಸಿಯಾಗಿರುವ ಹತ್ತಿ (Cotton) ದೇಶದ ಲಕ್ಷಾಂತರ ಜನರಜೀವನಕ್ಕೆ ಆಧಾರವೂ ಹೌದು. ಹತ್ತಿಯು ಒಂದು ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಪ್ರಪಂಚದಾದ್ಯಂತದ ಅನೇಕ ದೇಶಗಳ ಆರ್ಥಿಕತೆಯಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ಇದನ್ನು ಜವಳಿಗಳಿಗೆ ಮಾತ್ರವಲ್ಲದೆ, ವೈದ್ಯಕೀಯ ಕ್ಷೇತ್ರ, ಪಶು ಆಹಾರಗಳು, ಅಡುಗೆ ಎಣ್ಣೆ, ಸೌಂದರ್ಯ ವರ್ಧಕ, ಸಾಬೂನು ತಯಾರಿಕೆ ಸೇರಿದಂತೆ ಹಲವು ಉದ್ಯಮಗಳಲ್ಲಿ ಇದನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ. ಆದರೆ ಇಂದು ಹವಾಮಾನ ಬದಲಾವಣೆ ಸೇರಿದಂತೆ ಹಲವು ಸಮಸ್ಯೆಗಳ ಕಾರಣದಿಂದ ಹತ್ತಿ ಉತ್ಪಾದನೆ ಕಡಿಮೆಯಾಗುತ್ತಿದೆ. ಈ ನಿಟ್ಟಿನಲ್ಲಿ ಹತ್ತಿ ಹತ್ತಿ ಕೃಷಿ ಮತ್ತು ಅದರಲ್ಲಿ ತೊಡಗಿರುವ ಸಮುದಾಯಗಳು ಎದುರಿಸುತ್ತಿರುವ ಸಮಸ್ಯೆ, ಸವಾಲುಗಳನ್ನು ಎತ್ತಿ ತೋರಿಸಲು, ಹತ್ತಿ ಉತ್ಪಾದನೆಗೆ ಹೊಸ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲು ಮತ್ತು ಹತ್ತಿ ಬೆಳೆಯನ್ನು ಜಾಗತಿಕ ಮಟ್ಟದಲ್ಲಿ ಉತ್ತೇಜಿಸುವ ಉದ್ದೇಶದಿಂದ ಪ್ರತಿವರ್ಷ ಅಕ್ಟೋಬರ್‌ 7 ರಂದು ವಿಶ್ವ ಹತ್ತಿ ದಿನವನ್ನು (World Cotton Day) ಆಚರಿಸಲಾಗುತ್ತದೆ. ಈ ಆಚರಣೆಯ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.

ವಿಶ್ವ ಹತ್ತಿ ದಿನದ ಆಚರಣೆ ಯಾವಾಗ ಪ್ರಾರಂಭವಾಯಿತು?
ವಿಶ್ವ ಹತ್ತಿ ದಿನವನ್ನು ಪ್ರತಿ ವರ್ಷ ಅಕ್ಟೋಬರ್ 7 ರಂದು ಆಚರಿಸಲಾಗುತ್ತದೆ, ಬೆನಿನ್, ಬುರ್ಕಿನಾ, ಫಾಸೊ, ಚಾಡ್ ಮತ್ತು ಮಾಲಿ ಈ ನಾಲ್ಕು ದೇಶಗಳು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಗೆ ಸಲ್ಲಿಸಿದ ಪ್ರಸ್ತಾವನೆಯ ಮೇರೆಗೆ ವಿಶ್ವ ವ್ಯಾಪರ ಸಂಸ್ಥೆ (WTO) ಸಚಿವಾಲಯವು ವಿಶ್ವ ಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (FAO), ವಿಶ್ವಸಂಸ್ಥೆಯ ವ್ಯಾಪಾರ ಮತ್ತು ಅಭಿವೃದ್ಧಿ ಸಮ್ಮೇಳನ (UNCTAD), ಅಂತಾರಾಷ್ಟ್ರೀಯ ವ್ಯಾಪಾರ ಕೇಂದ್ರ (ITC) ಮತ್ತು ಅಂತಾರಾಷ್ಟ್ರೀಯ ಹತ್ತಿ ಸಲಹಾ ಸಮಿತಿಯ ಕಾರ್ಯದರ್ಶಿಗಳ ಸಹಯೋಗದೊಂದಿಗೆ ವಿಶ್ವ ಹತ್ತಿ ದಿನದ ಆಚರಣೆಯನ್ನು 2019 ರಲ್ಲಿ ಪ್ರಾರಂಭಿಸಿತು. ಅಂದಿನಿಂದ ಪ್ರತಿವರ್ಷ ಹತ್ತಿಬೆಳೆಯನ್ನು ಉತ್ತೇಜಿಸುವ ಹಾಗೂ ಹತ್ತಿ ಬೆಳೆಗಾರರಿಗೆ ಪ್ರೋತ್ಸಾಹವನ್ನು ನೀಡುವ ಉದ್ದೇಶದಿಂದ ಅಕ್ಟೋಬರ್ 07 ರಂದು ವಿಶ್ವದಾದ್ಯಂತ ಹತ್ತಿ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ವಿಶ್ವ ಹತ್ತಿ ದಿನದ ಆಚರಣೆಯ ಉದ್ದೇಶವೇನು?
ಆಹಾರ ಮತ್ತು ವಸತಿಯಷ್ಟೇ ಬಟ್ಟೆ ಅತ್ಯಗತ್ಯವಾದರೂ, ಹತ್ತಿ ಉದ್ಯಮಕ್ಕೆ ಅದಕ್ಕೆ ಸಿಗಬೇಕಾದ ಪ್ರಾಮುಖ್ಯತೆ ಸಿಗುತ್ತಿಲ್ಲ. ಹತ್ತಿ ಉದ್ಯಮವು ಬಟ್ಟೆಗಳನ್ನು ತಯಾರಿಸುವುದಷ್ಟೇ ಅಲ್ಲ, ಹಲವರಿಗೆ ಉದ್ಯೋಗದ ಪ್ರಮುಖ ಮೂಲವಾಗಿದೆ. ಆದ್ದರಿಂದ, ಹತ್ತಿಯ ಮಹತ್ವವನ್ನು ಎತ್ತಿ ತೋರಿಸುವುದು ಈ ದಿನವನ್ನು ಆಚರಿಸುವ ಪ್ರಾಥಮಿಕ ಉದ್ದೇಶವಾಗಿದೆ.
ಈ ದಿನದ ಉದ್ದೇಶ ಹತ್ತಿ ಉತ್ಪಾದನೆ ಮತ್ತು ಅದರ ಜಾಗತಿಕ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುವುದು.
ಹತ್ತಿ ಕೃಷಿ ಮತ್ತು ಕೈಗಾರಿಕೆಗಳ ಮಹತ್ವವನ್ನು ಉತ್ತೇಜಿಸುವುದು, ರೈತರು, ಕಾರ್ಮಿಕರು ಮತ್ತು ಸಂಬಂಧಿತ ಸಮುದಾಯಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿ ತೋರಿಸುವುದು ಮತ್ತು ಸುಸ್ಥಿರ ಹತ್ತಿ ಉತ್ಪಾದನೆ ಮತ್ತು ಅದರ ಪರಿಸರದ ಮೇಲಿನ ಪ್ರಭಾವದ ಬಗ್ಗೆ ಚರ್ಚಿಸಲು ಅವಕಾಶವನ್ನು ಒದಗಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದೆ.
ಹತ್ತಿ ಉತ್ಪಾದನೆಯಲ್ಲಿ ಅಗತ್ಯವಿರುವ ಎಲ್ಲಾ ಬದಲಾವಣೆಗಳನ್ನು ತರುವುದು, ಹತ್ತಿ ಉತ್ಪಾದನಾ ತಂತ್ರಗಳ ಅಭಿವೃದ್ಧಿಯನ್ನು ಉತ್ತೇಜಿಸುವುದು, ಈ ಕೆಲಸದಲ್ಲಿ ತೊಡಗಿರುವ ಎಲ್ಲ ಜನರನ್ನು ಒಗ್ಗೂಡಿಸುವುದು ಮತ್ತು ಗರಿಷ್ಠ ಉದ್ಯೋಗಾವಕಾಶಗಳನ್ನು ಒದಗಿಸುವುದು ವಿಶ್ವ ಹತ್ತಿ ದಿನದ ಉದ್ದೇಶವಾಗಿದೆ.
ಈ ದಿನ ಹತ್ತಿಯ ಅನೇಕ ಪ್ರಯೋಜನಗಳ ಕುರಿತು ಜನರಿಗೆ ಅರಿವು ಮೂಡಿಸಲು ಹಾಗೂ ಹತ್ತಿಯ ಉತ್ತಮ ಫಸಲನ್ನು ಪಡೆಯುವ ಮಾರ್ಗಗಳ ಬಗ್ಗೆ ಹತ್ತಿ ಬೆಳೆಗಾರರಿಗೆ ಮಾರ್ಗದರ್ಶನ ಹಾಗೂ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.
ವಿಶ್ವ ಹತ್ತಿ ದಿನದ ಸಂದರ್ಭದಲ್ಲಿ, ವಿಚಾರ ಸಂಕಿರಣಗಳು ಮತ್ತು ಕಾರ್ಯಾಗಾರಗಳಂತಹ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ, ಇದರಲ್ಲಿ ಹತ್ತಿ ಕೃಷಿ, ಅದರ ಪ್ರಯೋಜನಗಳು ಮತ್ತು ಸವಾಲುಗಳನ್ನು ಚರ್ಚಿಸಲಾಗುತ್ತದೆ, ಇದಲ್ಲದೆ, ಪ್ರದರ್ಶನಗಳನ್ನು ಸಹ ಆಯೋಜಿಸಲಾಗುತ್ತದೆ.


Spread the love
Share:

administrator

Leave a Reply

Your email address will not be published. Required fields are marked *