Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹುಟ್ಟುಹಬ್ಬದ ದಿನವೇ ಸ್ಕೂಟಿ ಅಪಘಾತದಲ್ಲಿ ಸುಬ್ರಹ್ಮಣ್ಯ ಸಾಲ್ಯಾನ್ ಸಾವು

Spread the love

ಕಾರ್ಕಳ : ತನ್ನ ಹುಟ್ಟುಹಬ್ಬದ ದಿನದಂದು ಮಗನಿಗೆ ಐಸ್ ಕ್ರೀಂ ತರಲು ಹೋಗಿದ್ದ ತಂದೆ ಅಪಘಾತದಲ್ಲಿ ಸಾವನಪ್ಪಿದ ಧಾರುಣ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಪರಪುವಿನಲ್ಲಿ ಜೂನ್ 7ರಂದು ನಡೆದಿದೆ.

ಕುಕ್ಕುಂದೂರು ಗ್ರಾಮದ ಪರಪು ನಿವಾಸಿ, ಆಟೋ ಚಾಲಕ, ಕುಕ್ಕುಂದೂರು ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಸಾಲ್ಯಾನ್ (36) ಮೃತ ದುರ್ದೈವಿ. ಹುಟ್ಟಹಬ್ಬದ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಅವರು ಶನಿವಾರ ರಾತ್ರಿ ಮಗುವಿಗೆ ಐಸ್ ಕ್ರೀಂ ತರಲು ಮನೆಯಿಂದ ಸ್ಕೂಟಿಯಲ್ಲಿ ಪೇಟೆಗೆ ಬಂದಿದ್ದರು. ನಂತರ ಅವರು 10.30ರ ವೇಳೆಗೆ ಮನೆಗೆ ವಾಪಸಾಗುತ್ತಿದ್ದಾಗ ಪರಪು ಸೇತುವೆ ಬಳಿ ನಿಯಂತ್ರಣ ತಪ್ಪಿ ಸ್ಕೂಟಿ ಸಹಿತ ಹೊಳೆಗೆ ಬಿದ್ದಿದ್ದರು.

ರಾತ್ರಿಯಿಡೀ ಸುಬ್ರಹ್ಮಣ್ಯ ಅವರಿಗಾಗಿ ಹುಡುಕಾಟ ನಡೆಸಿದರೂ ಅವರ ಸುಳಿವು ಸಿಕ್ಕಿರಲಿಲ್ಲ. ಊರಿನವರು ಹುಡುಕುವಾಗ ಸೇತುವೆಯಡಿ ಸ್ಕೂಟಿಯೊಂದಿಗೆ ಮೃತದೇಹ ಪತ್ತೆಯಾಗಿದೆ. ಸುಬ್ರಹ್ಮಣ್ಯ ಅವರು ತಂದೆ, ತಾಯಿ, ಸಹೋದರಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *