Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಆಗುಂಬೆ ಘಾಟಿ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ: ಭಾರೀ ವಾಹನ ಸಂಚಾರ ನಿರ್ಬಂಧ

Spread the love

ಉಡುಪಿ : ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ) (2) ಮತ್ತು (5) ರನ್ವಯ, ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ ಮೂಲಕ ಜೂನ್ 15 ರಿಂದ ಸೆಪ್ಟಂಬರ್ 30 ರ ವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ಧಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *