Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಓಸ್ಲೋ: ನಾರ್ವೆ ಚೆಸ್ ಮುಡಿಗೇರಿಸಿಕೊಂಡು ಇತಿಹಾಸ ನಿರ್ಮಿಸಿದ ಭಾರತದ ಆರ್. ಪ್ರಜ್ಞಾನಂದ!

Spread the love

ನಾರ್ವೆ : ಭಾರತದ ಗ್ರಾಂಡ್ ಮಾಸ್ಟರ್ ಆರ್ ಪ್ರಜ್ಞಾನಂದ ಓಪ್ಲೋದಲ್ಲಿ ನಡೆದ ಪ್ರತಿಷ್ಠಿತ ನಾರ್ವೆ ಚೆಸ್ ಪ್ರಶಸ್ತಿಯನ್ನು ಜಯಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಜರ್ಮನಿಯ ವಿನ್ಸೆಂಟ್ ಕೀಮ‌ರ್ ವಿರುದ್ಧ ಅಂತಿಮ ಸುತ್ತಿನಲ್ಲಿ ಜಯಿಸುವ ಮೂಲಕ ಪ್ರತಿಷ್ಠಿತ ‘ನಾರ್ವೆ ಚೆಸ್ ಪ್ರಶಸ್ತಿ ಮುಡಿಗೇರಿಸಿಕೊಂಡ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಟೂರ್ನಿಯ ಆರಂಭದಲ್ಲಿ ಪ್ರಜ್ಞಾನಂದ ಅವರು 6 ಇತರೆ ಪ್ರಮುಖ ಆಟಗಾರರ ಎದುರು ನಿಧಾನಗತಿಯಲ್ಲಿ ಮುನ್ನಡೆ ಪಡೆದಿದ್ದರು. ಆದರೆ, ದ್ವಿತೀಯಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದರು. ನಾರ್ವೆ ಚೆಸ್‌ನಲ್ಲಿ 7 ಬಾರಿ ಚಾಂಪಿಯನ್ ಆಗಿರುವ ಮತ್ತು ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್ಟನ್ ಅವರನ್ನು 2 ಬಾರಿ ಸೋಲಿಸುವ ಮೂಲಕ ಪ್ರಜ್ಞಾನಂದ ಮೇಲುಗೈ ಸಾಧಿಸಿದ್ದರು.
ನಾರ್ವೆ ಚೆಸ್‌ ಪಂದ್ಯಾವಳಿಯು ಪ್ರತಿಷ್ಠಿತ ಪಂದ್ಯಾವಳಿಯಾಗಿದ್ದು, ವಿಶ್ವದ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್ಸನ್, ಹಾಲಿ ವಿಶ್ವ ಚಾಂಪಿಯನ್ ಡಿ ಗುಕೇಶ್, ಅಲಿರೆಜಾ ಫಿರೋಝಾ ವೆಸ್ಲಿ ಸೋ ಮತ್ತು ಕೇಮರ್‌ ಭಾಗವಹಿಸಿದ್ದರು.
ಭಾರತದ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಮತ್ತು ಹಾಲಿ ವಿಶ್ವ ಚಾಂಪಿಯನ್ ಡಿ. ಗುಕೇಶ್ ಸೇರಿದಂತೆ ಅವರಿಗೆ ಸಾಧ್ಯವಾಗದ ಈ ಅಪರೂಪದ ಸಾಧನೆಯನ್ನು ಪ್ರಜ್ಞಾನಂದ ಮಾಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *