Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶೋಭನಾ ಪದ್ಮಭೂಷಣ ಸ್ವೀಕರಿಸಿದ ರೀತಿಗೆ ಪ್ರಶಂಸೆ – ಸಂಸ್ಕೃತಿಯ ಸಂಕೇತವಾಗಿ ಮೆಚ್ಚುಗೆ

Spread the love

ದೆಹಲಿ : ಕೇಂದ್ರ ಸರ್ಕಾರವು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳಿಗೆ ವಾರ್ಷಿಕವಾಗಿ ಪದ್ಮ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ. ಕೇಂದ್ರ ಸರ್ಕಾರವು 139 ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದು, ಅದರಲ್ಲಿ ಏಳು ಪದ್ಮವಿಭೂಷಣ, 19 ಪದ್ಮಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳು ಸೇರಿವೆ. ರಾಷ್ಟ್ರಪತಿಗಳು ಈಗಾಗಲೇ ಮೊದಲ ಹಂತದಲ್ಲಿ 71 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದರೆ, ನಿನ್ನೆ ಎರಡನೇ ಹಂತದಲ್ಲಿ 68 ಜನರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಈ ಬಾರಿ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ 23 ಮಹಿಳೆಯರು ಸ್ಥಾನ ಪಡೆದಿದ್ದಾರೆ. ಅವರಲ್ಲಿ, ನಟಿ ಮತ್ತು ಭರತನಾಟ್ಯ ಕಲಾವಿದೆ ಶೋಭನಾ ಅವರು ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ್ದಾರೆ.

ನಟಿ ಶೋಭನಾ ಅವರು ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸುವಾಗ ಅವರು ಚಪ್ಪಲಿ ಧರಿಸದೇ ರಾಷ್ಟ್ರಪತಿ ಅವರಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ್ದಾರೆ. ಸದ್ಯ ಶೋಭನಾ ಪ್ರಶಸ್ತಿ ಸ್ವೀಕರಿಸಿದ ರೀತಿಗೆ ಅನೇಕರಿಂದ ಪ್ರಶಂಸೆಗಳು ಬಂದಿದೆ. ಇನ್ನು ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಬಗ್ಗೆ ಮಾತನಾಡಿದ ಶೋಭನಾ, “ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಲು ನನಗೆ ತುಂಬಾ ಗೌರವವಾಗಿದೆ. ನಾನು ಈ ಪ್ರಶಸ್ತಿಯನ್ನು ಮಹಾನ್ ಪ್ರತಿಭೆಗಳ ಜೊತೆಗೆ ಸ್ವೀಕರಿಸಿದ್ದೇನೆ ಎಂದು ಹೇಳಿದರು.


Spread the love
Share:

administrator

Leave a Reply

Your email address will not be published. Required fields are marked *