ಭಾರತದ ತಾಂತ್ರಿಕ ಕ್ರಮಗಳ ಬೆನ್ನಲ್ಲೇ ಕ್ಷಿಪಣಿ ಪರೀಕ್ಷೆ ನಡೆಸಿದ ಪಾಕ್

ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತ ಕೈಗೊಂಡ ರಾಜತಾಂತ್ರಿಕ ಕ್ರಮಗಳಿಂದ ಬೆಚ್ಚಿ ಬಿದ್ದಿರುವ ನೆರೆ ರಾಷ್ಟ್ರ ಪಾಕಿಸ್ತಾನ ಭವಿಷ್ಯದಲ್ಲಿ ಸಂಭವಿಸಬಹುದಾದ ದಾಳಿಯನ್ನು ಎದುರಿಸಲು ಅರಬ್ಬಿ ಸಮುದ್ರದಲ್ಲಿ ಕ್ಷಿಪಣಿ ಪರೀಕ್ಷೆಯನ್ನು ನಡೆಸಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ 27 ಮಂದಿ ಹತ್ಯೆಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಮೇಲೆ ವೈಮಾನಿಕ ದಾಳಿ(ಏರ್ ಸ್ಟ್ರೈಕ್), ಸರ್ಜಿಕಲ್ ಸ್ಟ್ರೈಕ್ ಸೇರಿದಂತೆ ಸೇನಾ ಕಾರ್ಯಾಚರಣೆ ನಡೆಸಲು ಸನ್ನದ್ಧವಾಗಿದೆ ಎಂದು ಹೇಳಲಾಗುತ್ತಿದೆ.
ಈ ಬೆಳವಣಿಗೆಗಳಿಂದ ಬೆಚ್ಚಿ ಬಿದ್ದಿರುವ ಪಾಕಿಸ್ತಾನ 480 ಕಿ.ಮೀ ಗುರಿ ಸಾಮಥ್ರ್ಯ ಹೊಂದಿರುವ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ ಎಂದು ವರದಿಯಾಗಿದೆ.
ಕರಾಚಿಯಲ್ಲಿರುವ ಅರಬ್ಬೀ ಸಮುದ್ರದಲ್ಲಿ ಯಶಸ್ವಿಯಾಗಿ ಕ್ಷಿಪಣಿಯನ್ನು ಪರೀಕ್ಷೆ ನಡೆಸಿದ್ದು, ಭಾರತದ ಯಾವುದೇ ದಾಳಿಯನ್ನು ಎದುರಿಸಲು ನಾವು ಸನ್ನದ್ಧರಾಗಿದ್ದೇವೆ ಎಂಬ ಸಂದೇಶ ರವಾನಿಸಲು ಇದನ್ನು ನಡೆಸಲಾಗಿದೆ ಎಂದು ಹೇಳಲಾಗಿದೆ.
ಕರಾಚಿಗೆ ಹೊಂದಿಕೊಂಡಿರುವ ಕರಾವಳಿ ತೀರಪ್ರದೇಶದಲ್ಲಿ ಸತತವಾಗಿ ಪರೀಕ್ಷಾರ್ಥ ಕ್ಷಿಪಣಿ ನಡೆಸುವಂತೆ ಸೇನಾ ಮುಖ್ಯಸ್ಥರು ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.