ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ

ಶಿವಮೊಗ್ಗ,: ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಇದರ ಬೆನ್ನಲ್ಲೇ, ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಹಿಂದೂ ಸಂಘಟನೆಗಳು ಆಗ್ರಹಿಸಿವೆ. ‘ಪಾಕ್ ಪರ ಘೋಷಣೆ ಕೂಗಿರುವ ಬಗ್ಗೆ ಮಾಹಿತಿ ಬಂದಿದೆ. ಈದ್ ಮಿಲಾದ್ ಮೆರವಣಿಗೆಯ ಬಗ್ಗೆ ವಿಡಿಯೋ ಮಾಡಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳುತ್ತೇವೆ’ ಎಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ.
