ಪಾಲ್ಗರ್: ಮುಂಬೈ-ಅಹ್ಮದಾಬಾದ್ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; 13 ಅತಿಥಿಗಳ ಸಾ*ವು, 25 ಜನರಿಗೆ ಗಾಯ!

ಪಾಲ್ವರ್: ಮಹಾರಾಷ್ಟ್ರದ ಪಾಲ್ವರ್‌ನಲ್ಲಿ ಮುಂಬೈ-ಅಹ್ಮದಾಬಾದ್ ಹೆದ್ದಾರಿಯಲ್ಲಿ ನಿಶ್ಚಿತಾರ್ಥ ಸಮಾರಂಭಕ್ಕೆ ಅತಿಥಿಗಳನ್ನು ಕರೆದೊಯ್ಯುತ್ತಿದ್ದ ಟೆಂಪೋಗೆ ವೇಗವಾಗಿ ಬಂದ ಕಂಟೇನರ್ ಟ್ರೇಲರ್ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 13 ಜನರು ಮೃತಪಟ್ಟಿದ್ದು, 25 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ-ಅಹ್ಮದಾಬಾದ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಟೆಂಪೋದಲ್ಲಿ 50ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆದ್ದಾರಿಯಿಂದ ಒಂದು ಕಿಮೀ ದೂರದಲ್ಲಿದ್ದ ಯೂಟರ್ನ್ ಅನ್ನು ತಪ್ಪಿಸಲು ಟ್ರಕ್ ಚಾಲಕ ವಿರುದ್ಧ ದಿಕ್ಕಿನಲ್ಲಿ ಬಂದಾಗ ಟ್ರಕ್ ನಿಯಂತ್ರಣ ತಪ್ಪಿದ್ದು, ಅದರ ಕಂಟೇನರ್ ಬಾಕ್ಸ್ ಟೆಂಪೋ ಮೇಲೆ ಬಿದ್ದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಬಗ್ಗೆ ಆಘಾತವನ್ನು ವ್ಯಕ್ತಪಡಿಸಿದ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
