Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಮೆರಿಕ ಸೇರಲು 18 ಗುಡ್ಡ, 15 ಕಿ.ಮೀ ಬೋಟ್‌, 45 ಕಿ.ಮೀ ನಡಿಗೆ ಯಲ್ಲಿ ಸಿಕ್ಕಿಬಿದ್ದರೆ? ಹರ್ವಿಂದರ್‌ ಸಿಂಗ್‌ನ ಭೀಕರ ಪ್ರಯಾಣದ ಕಥೆ..!

Spread the love

ಚಂಡೀಗಢ: ಉತ್ತಮ ಭವಿಷ್ಯ ಅರಸಿ ಅಮೆರಿಕಕ್ಕೆ ತೆರಳವು ಕನಸು ಕಂಡಿದ್ದ ಪಂಜಾಬ್‌ನ ಹೋಶಿಯಾರ್‌ಪುರದ ಹರ್ವಿಂದರ್‌ ಸಿಂಗ್‌ರದ್ದು ಕೂಡಾ ಗೋಳಿನ ಕಥೆ.ವ್ಯಕ್ತಿಯೊಬ್ಬ ನಮ್ಮನ್ನು ಯುರೋಪ್‌ ಮೂಲಕ ಅಮೆರಿಕಕ್ಕೆ ಕರೆದೊಯ್ಯುವ ಭರವಸೆ ನೀಡಿದ್ದ. ಇದಕ್ಕಾಗಿ ಆತನಿಗೆ ನಾನು 42 ಲಕ್ಷ ರು.ನೀಡಿದ್ದೆ. ಕಳೆದ ಆಗಸ್ಟ್‌ನಲ್ಲಿ ನಮ್ಮನ್ನು ಮೊದಲಿಗೆ ಕತಾರ್‌ಗೆ ಕರೆದೊಯ್ಯಲಾಯಿತು. ಅಲ್ಲಿಂದ ಬ್ರೆಜಿಲ್‌, ಪೆರು, ಕೊಲಂಬಿಯಾ, ಪನಾಮಾ, ನಿಕರಾಗುವಾ ಮತ್ತು ಬಳಿಕ ಮೆಕ್ಸಿಕೋಗೆ ಕರೆದೊಯ್ಯಲಾಯಿತು.

ಮೆಕ್ಸಿಕೋದಿಂದ ಇತರೆ ಕೆಲವರ ಜೊತೆಗೆ ನಮ್ಮನ್ನು ಅಮೆರಿಕದ ಗಡಿಯತ್ತ ಕರೆದೊಯ್ಯಲಾಯಿತು. ಈ ಹಾದಿಯಲ್ಲಿ ನಾವು ಬೆಟ್ಟ, ಗುಡ್ಡಗಳನ್ನು ಹತ್ತಿಳಿದೆವು. ಒಂದು ಕಡೆ ಸಮುದ್ರದಲ್ಲಿ ಸಾಗುವಾಗ ಇನ್ನೇನು ಬೋಟ್‌ ಮುಳುಗಿ ನಾವೆಲ್ಲಾ ನೀರು ಪಾಲಾದೆವು ಅನ್ನುವ ಹೊತ್ತಿನಲ್ಲಿ ಅದು ಹೇಗೋ ಜೀವ ಉಳಿಸಿಕೊಂಡಿದ್ದೆವು. ಆದರೆ ಕೆಲವರು ಸಮುದ್ರದಲ್ಲಿ ಬಿದ್ದು ಸಾವನ್ನಪ್ಪಿದ ಭೀಕರ ದೃಶ್ಯಗಳನ್ನೂ ನಾವು ನೋಡಿದ್ದನ್ನು ಮರೆಯಲಾಗದು. ಜೊತೆಗೆ ಪನಾಮಾ ಕಾಡಿನಲ್ಲಿ ತೆರಳುವಾಗಲೂ ನಡೆಯಲಾಗದೇ ಕೆಲ ವ್ಯಕ್ತಿಗಳು ಸಾವನ್ನಪ್ಪಿದ್ದರು. ಕೆಲವು ಕಡೆ ತಿನ್ನಲು ಅನ್ನ ಸಿಕ್ಕಿದರೆ ಇನ್ನು ಕೆಲವು ಕಡೆ ಏನೂ ಸಿಗುತ್ತಿರಲಿಲ್ಲ. ಬಿಸ್ಕೆಟ್‌ ತಿಂದೇ ದಿನ ಕಳೆಯುತ್ತಿದ್ದೆವು. ಕೆಲವು ಕಡೆ ಕಳ್ಳರು ನಮ್ಮನ್ನು ಅಡ್ಡಗಟ್ಟಿ ನಮ್ಮ ಬಳಿ ಇದ್ದ ದುಬಾರಿ ಬಟ್ಟೆಗಳನ್ನು ದೋಚಿದರು.

ಆದರೆ ಉತ್ತಮ ಭವಿಷ್ಯದ ಕನಸಿನಲ್ಲಿ ನಾವು ಅಮೆರಿಕದ ಕಡೆಗೆ ಹೆಜ್ಜೆ ಹಾಕಿದ್ದೆವು. ಕೆಲವು ಕಡೆ ನಾವು 15 ಗಂಟೆ ಸುದೀರ್ಘ ಬೋಟ್‌ನ ಪ್ರಯಾಣ ಮಾಡಿದರೆ ಇನ್ನು ಕೆಲವು ಕಡೆ 40-45 ಕಿ.ಮೀ ನಡೆಯಬೇಕಾಗಿ ಬಂದಿತ್ತು. ನಾವು ಒಟ್ಟು 17-18 ಬೆಟ್ಟಗಳನ್ನು ದಾಟಿರಬಹುದು. ಈ ಪೈಕಿ ಯಾರು ಯಾವುದರಲ್ಲಿ ಸ್ವಲ್ಪ ಆಯ ತಪ್ಪಿ ಬಿದ್ದರೂ ಸಾವು ಖಚಿತ ಎನ್ನುವ ಪರಿಸ್ಥಿತಿ ಇತ್ತು. ಅಲ್ಲಿ ಯಾರಾದರೂ ಗಾಯಗೊಂಡರೆ ಅವರನ್ನು ಅಲ್ಲೇ ಸಾಯಲು ಬಿಟ್ಟು ಮುಂದೆ ಹೋಗುವುದೊಂದೇ ಅವರ ನೀತಿಯಾಗಿತ್ತು.

ಅಂತಿಮವಾಗಿ ನಾವು ಅಮೆರಿಕ ಗಡಿ ತಲುಪಿ, ಗಡಿ ದಾಟಲು ಯತ್ನಿಸಿದಾಗ ಅಮೆರಿಕದ ಅಧಿಕಾರಿಗಳು ನಮ್ಮನ್ನು ಬಂಧಿಸಿದರು ಎಂದು ಹರ್ವಿಂದರ್‌ ಸಿಂಗ್ ತಮ್ಮ ನೋವು ತೋಡಿಕೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *