Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನಟ ದಳಪತಿ ವಿಜಯ್ ನಿವಾಸಕ್ಕೆ ನುಗ್ಗಿದ ವ್ಯಕ್ತಿ: ಮಾನಸಿಕ ಅಸ್ವಸ್ಥ ಎಂದು ಪತ್ತೆ

Spread the love

ಚೆನ್ನೈ: ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ, ತಮಿಳು ನಟ ದಳಪತಿ ವಿಜಯ್ಅವರ ನಿವಾಸಕ್ಕೆ ವ್ಯಕ್ತಿಯೊಬ್ಬ ನುಗ್ಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ನೀಲಂಕರೈ ನಿವಾಸಕ್ಕೆ ವ್ಯಕ್ತಿಯೊಬ್ಬ ನುಗ್ಗಿದ್ದಾನೆ. ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಆದರೆ ಆ ವ್ಯಕ್ತಿಯ ಮಾನಸಿ ಸ್ಥಿತಿ ಸರಿ ಇಲ್ಲ ಎಂಬುದು ತಿಳಿದುಬಂದಿದೆ.

ವಿಜಯ್ ಅವರ ಮನೆಯ ಟೆರೇಸ್ ಮೇಲೆ ಕುಳಿತಿದ್ದ ವ್ಯಕ್ತಿಯನ್ನು ಗಮನಿಸಿದ ಭದ್ರತಾ ಸಿಬ್ಬಂದಿ ತಕ್ಷಣವೇ ಆತನನ್ನು ಬಂಧಿಸಿದರು. ನಂತರ ಪೊಲೀಸರಿಗೆ ಒಪ್ಪಿಸಲಾಯಿತು. ಮೂಲಗಳ ಪ್ರಕಾರ, ಆತ ಮಾನಸಿಕವಾಗಿ ಅಸ್ವಸ್ಥರಾಗಿದ್ದು, ವೇಲಾಚೇರಿಯಲ್ಲಿ ತಮ್ಮ ಚಿಕ್ಕಮ್ಮನೊಂದಿಗೆ ವಾಸಿಸುತ್ತಿದ್ದ. ಘಟನೆಯ ನಂತರ, ಅವರನ್ನು ಸರ್ಕಾರಿ ಆಶ್ರಯ ತಾಣಕ್ಕೆ ಕರೆದೊಯ್ಯಲಾಯಿತು.

ಅವರು ವಿಜಯ್ ಅವರ ನಿವಾಸಕ್ಕೆ ಹೇಗೆ ಪ್ರವೇಶಿಸಿದರು ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಳೆದ ಜುಲೈ ತಿಂಗಳಲ್ಲಿ, ಚೆನ್ನೈನ ಪೂರ್ವ ಕರಾವಳಿ ರಸ್ತೆಯಲ್ಲಿರುವ ನೀಲಂಕಾರೈನಲ್ಲಿರುವ ವಿಜಯ್ ಅವರ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ ಬಂದಿತ್ತು. ನಟ-ರಾಜಕಾರಣಿಯ ಮನೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಚೆನ್ನೈ ಪೊಲೀಸ್ ನಿಯಂತ್ರಣ ಕೊಠಡಿಗೆ ಇಂದು ಬೆಳಗ್ಗೆ 5.20 ರ ಸುಮಾರಿಗೆ ಕರೆ ಮಾಡಲಾಗಿತ್ತು.

ಕಳುಹಿಸಲಾಯಿತು. ಸುಮಾರು ಒಂದು ಗಂಟೆ ಪರಿಶೀಲನೆಯ ನಂತರ, ಸ್ಥಳದಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ ಎಂದು ಬಾಂಬ್ ನಿಷ್ಕ್ರಿಯ ದಳ ದೃಢಪಡಿಸಿದೆ. ಅಧಿಕಾರಿಗಳು ಇದನ್ನು ಹುಸಿ ಬಾಂಬ್ ಬೆದರಿಕೆ ಎಂದು ತಿಳಿಸಿದ್ದಾರೆ.

2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *