Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪೆಟ್ರೋಲ್, ಡೀಸೆಲ್ ದರ ಮತ್ತೆ ಜಿಗಿತ: ಸೋಮವಾರದಿಂದಲೇ ಹೊಸ ದರ ಜಾರಿ

Spread the love

ಭಟ್ಕಳ: ತಾಲೂಕಿನ ತಟ್ಟಿಹಕ್ಕಲು ಸಮೀಪದ ವೆಂಕಟಾಪುರ ನದಿಯಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ದುರಂತದಲ್ಲಿ ಕಪ್ಪೆಚಿಪ್ಪು (ಮಳ್ವಿ) ಸಂಗ್ರಹಿಸಲು ನದಿಗೆ ಇಳಿದಿದ್ದ ಒಟ್ಟು 14 ಮಂದಿಯಲ್ಲಿ ಎಂಟು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಮೂವರು ನಾಪತ್ತೆಯಾಗಿದ್ದರು. ಇದರಲ್ಲಿ ಸಂಜೆಯ ವೇಳೆಗೆ ಮತ್ತಿಬ್ಬರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ನಾಪತೆಯಾದವರಲ್ಲಿ ಮಾದೇವ ಭೈರಪ್ಪ ನಾಯ್ಕ, ಮಂಜಮ್ಮ ಗೊಯ್ದ ನಾಯ್ಕ ಹಾಗೂ ನಾಗರತ್ನ ಪರಮೇಶ್ವರ್ ನಾಯ್ಕೆ ಸೇರಿದ್ದರು. ಇವರಲ್ಲಿ ಇಬ್ಬರು ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ. ಓರ್ವ ವ್ಯಕ್ತಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಲಕ್ಷ್ಮೀ ಮಾದೇವ ನಾಯ್ಕ(38), ಲಕ್ಷ್ಮೀ ಶಿವರಾಮ್ ನಾಯ್ಕ(39), ಮಾಲತಿ ಜಟ್ಟಪ್ಪ ನಾಯ್ಕ(38), ಮಾಸ್ತಮ್ಮ ಮಂಜುನಾಥ ನಾಯ್ಕ(43), ಲಕ್ಷ್ಮೀ ನಾಯ್ಕ, ಜ್ಯೋತಿ ನಾಯ್ಕ(37) ಉಮೇಶ್ ಮಂಜುನಾಥ ನಾಯ್ಕ(42) ಹಾಗೂ ಲಕ್ಷ್ಮೀ ಅಣ್ಣಪ್ಪ ನಾಯ್ಕ(44) ಎಂದು ಗುರುತಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಬಳಿಯ ತಟ್ಟೆಹಕಲ್ಲು ಕಡಲತೀರದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿದ್ದ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದುರಂತ ಸುದ್ದಿ ಕೇಳಿ ಅತೀವ ನೋವಾಯಿತು. ಅಗಲಿದ ಆತ್ಮಗಳಿಗೆ ಚಿರಶಾಂತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ಮಾನವೀಯತೆಯ ಆಧಾರದ ಮೇಲೆ ರಾಜ್ಯ ಸರ್ಕಾರವು ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡುತ್ತದೆ.

ಈ ಅಪಘಾತದಲ್ಲಿ ಇನ್ನೂ ಕೆಲವರು ಕಾಣೆಯಾಗಿದ್ದಾರೆ ಎಂಬ ಮಾಹಿತಿಯೂ ಇದೆ. ಅವರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಕಾಣೆಯಾದ ವ್ಯಕ್ತಿಗಳು ಬದುಕುಳಿದು ಅವರ ಕುಟುಂಬಗಳೊಂದಿಗೆ ಮತ್ತೆ ಸೇರಲಿ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *