ಪ್ರೇಮ ನಿರಾಕರಿಸಿದ್ದಕ್ಕೆ ಯುವತಿ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ (Coimbatore) ಯುವತಿಯೊಬ್ಬರು ಪುರುಷನ ಪ್ರಪೋಸಲ್ ನಿರಾಕರಿಸಿದ ಕಾರಣದಿಂದ ಆತ ತನ್ನ ಗ್ಯಾಂಗ್ ಜೊತೆ ಸೇರಿ ಆಕೆಯ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ. ಆ ಯುವತಿ ಸ್ವಲ್ಪ ಸಮಯದಿಂದ ಅವನೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದರು. ಆದರೆ ಇತ್ತೀಚೆಗೆ ಅವನ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದರಿಂದ ಆಕೆ ಅವನೊಂದಿಗಿನ ಸಂಬಂಧವನ್ನು ಕಡಿದುಕೊಳ್ಳಲು ನಿರ್ಧರಿಸಿದರು. ಇದು ಆ ವ್ಯಕ್ತಿಯನ್ನು ಕೆರಳಿಸಿತು.
ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಆ ಯುವತಿ ಕಾಳಿಕ್ಕನೈಕ್ಕನ್‌ಪಾಳ್ಯಂನಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಎರಡನೇ ವರ್ಷದ ವಿದ್ಯಾರ್ಥಿನಿ. ಅವರು ಚೆನ್ನೈನ ಕಾರ್ತಿ ಎಂಬ ವ್ಯಕ್ತಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸ್ನೇಹ ಬೆಳೆಸಿಕೊಂಡಿದ್ದರು. ಬಳಿಕ ಅವರಿಬ್ಬರೂ ಪ್ರೀತಿಸತೊಡಗಿದ್ದರು. ಆದರೆ, ಇತ್ತೀಚೆಗೆ ಆ ಯುವತಿಗೆ ಕಾರ್ತಿ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದು ಗೊತ್ತಾಯಿತು. ಹೀಗಾಗಿ ಆಕೆ ತಕ್ಷಣವೇ ಅವನೊಂದಿಗಿನ ಎಲ್ಲ ಸಂಬಂಧಗಳನ್ನು ಕಡಿದುಕೊಳ್ಳಲು ನಿರ್ಧರಿಸಿದರು. ಇದರಿಂದ ಕೋಪಗೊಂಡ ಕಾರ್ತಿ ತನ್ನ ಸ್ನೇಹಿತರೊಂದಿಗೆ ಆಕೆಯ ಮನೆಗೆ ಹೋಗಿ ಪೆಟ್ರೋಲ್ ಬಾಂಬ್‌ಗಳನ್ನು ಎಸೆದು ಪರಾರಿಯಾಗಿದ್ದಾನೆ.
